ಯಾದಗಿರಿ: ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕೊಡೇಕಲ್‌ನಲ್ಲಿ (Yadgiri) ಇದೇ ಏಪ್ರಿಲ್ 6 ರಂದು ಕಲ್ಲು ತೂರಾಟದ (Stone Pelting) ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿಸಿದ್ದ ನಿಷೇಧಾಜ್ಞೆಯನ್ನು (Prohibition) ಮತ್ತೆರಡು ದಿನಕ್ಕೆ ವಿಸ್ತರಣೆ ಮಾಡಲಾಗಿದೆ.
ಏಪ್ರಿಲ್ 8 ರವರೆಗೂ ಇದ್ದ 144 ಸೆಕ್ಷನ್ ಅನ್ನು ಏಪ್ರಿಲ್ 12ರ ರಾತ್ರಿ 8 ಗಂಟೆಯವರೆಗೆ ವಿಸ್ತರಿಸಿ, ಜಿಲ್ಲಾಧಿಕಾರಿ ಸ್ನೇಹಲ್ ಆರ್ ಅವರು ಆದೇಶ ನೀಡಿದ್ದಾರೆ. ಇದನ್ನೂ ಓದಿ: ಕೋವಿಡ್ ಕೇಸ್ ತೀವ್ರ ಹೆಚ್ಚಳ – ಕೇರಳ, ಹರಿಯಾಣ, ಪುದುಚೇರಿಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯ
Advertisement
Advertisement
ಬಿಜೆಪಿ ಶಾಸಕ ರಾಜೂಗೌಡ ಸ್ವಗ್ರಾಮ ಕೊಡೇಕಲ್‌ನಲ್ಲಿ ಕೆಲ ದಿನಗಳ ಹಿಂದೆ ಕಲ್ಲು ತೂರಾಟದ ಜೊತೆಗೆ ಮಾರಕಾಸ್ತ್ರಗಳಿಂದ ದಾಳಿ ನಡೆದಿತ್ತು. ಕಾಂಗ್ರೆಸ್-ಬಿಜೆಪಿ (Congress-BJP) ಕಾರ್ಯಕರ್ತರ ಪರಸ್ಪರ ಕಲ್ಲು ತೂರಾಟ ಪ್ರಕರಣದಲ್ಲಿ 4-5 ಜನರಿಗೆ ಗಂಭೀರ ಗಾಯಗಳಾಗಿದ್ದವು.
Advertisement
ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 5 ಪ್ರಕರಣಗಳು ದಾಖಲಾಗಿವೆ. 25 ಆರೋಪಿಗಳ ಬಂಧನವಾಗಿದೆ. ಸದ್ಯ ಕ್ಷೇತ್ರದಾದ್ಯಂತ ಶಾಂತಿ-ಸುವ್ಯವಸ್ಥೆ ಕಾಪಾಡುವ ಜೊತೆಗೆ ಇನ್ನುಳಿದ ಆರೋಪಿಗಳ ಪತ್ತೆಗಾಗಿ ನಿಷೇಧಾಜ್ಞೆ ವಿಸ್ತರಣೆ ಮಾಡಲಾಗಿದೆ. ಇದನ್ನೂ ಓದಿ: ಬಂಡೀಪುರಕ್ಕೆ ಪ್ರಧಾನಿ ಮೋದಿ ಆಗಮನ