ಮೈಸೂರು: ನಂಜನಗೂಡು (Nanjanagudu) ತಾಲೂಕಿನ ಕಾರ್ಯ ಗ್ರಾಮದಲ್ಲಿ ಸಿದ್ದೇಶ್ವರ ಸ್ವಾಮಿ ಜಾತ್ರಾ (Siddeshwaraswamy Jatre) ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿ ಕಲ್ಲು ತೂರಾಟ ನಡೆದಿದೆ. ಇದರಿಂದ ಮಗು ಸೇರಿದಂತೆ ಮೂವರಿಗೆ ಗಾಯಗಳಾಗಿವೆ.
ಜಾತ್ರೆ ವೇಳೆ ಪಟಾಕಿ ಸಿಡಿಸುವ ವಿಚಾರಕ್ಕೆ ಗಲಾಟೆ ಆರಂಭವಾಗಿದೆ. ಈ ವೇಳೆ, ಪರಸ್ಪರ ಕಲ್ಲು ತೂರಾಟ ನಡೆದಿದೆ. ಇದರಿಂದ ಆನಂದ್, ಭರತ್, ಅಭಿ ಹಾಗೂ ಮಗುವಿಗೆ ಗಾಯವಾಗಿದೆ. ಗಾಯಾಳುಗಳಿಗೆ ತಗಡೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಪಕ್ಷದಲ್ಲೇ ಮೋಸ ಮಾಡುವವರು, ಬೆನ್ನಿಗೆ ಚಾಕು ಹಾಕುವವರು ಇದ್ದಾರೆ;ಸ್ವಪಕ್ಷೀಯರ ವಿರುದ್ಧವೇ ಮಲ್ಲಿಕಾರ್ಜುನ್ ಆಕ್ರೋಶ
ಗಲಾಟೆ ನಡೆದಿದ್ದರಿಂದ ಬೆಟ್ಟದಿಂದ ಆಗಮಿಸುತ್ತಿದ್ದ ಸಿದ್ದೇಶ್ವರ ಸ್ವಾಮಿ ರಥೋತ್ಸವ ಅರ್ಧಕ್ಕೆ ಸ್ಥಗಿತಗೊಳಿಸಲಾಗಿದೆ. ಮೆರವಣಿಗೆ ವೇಳೆ ಸೂಕ್ತ ಪೊಲೀಸ್ ಭದ್ರತೆ ಇರಲಿಲ್ಲ. ಸ್ಥಳಕ್ಕೆ ತಹಶೀಲ್ದಾರ್ ಆಗಮಿಸಬೇಕು. ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದು ಎಂದು ಸ್ಥಳೀಯರ ಆಕ್ರೋಶ ಹೊರಹಾಕಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಇದನ್ನೂ ಓದಿ: ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣ – ಆರೋಪಿ ಇಮ್ಮಡಿ ಮಹದೇವಸ್ವಾಮಿ ಮಧ್ಯಂತರ ಜಾಮೀನು ಅರ್ಜಿ ವಜಾ
