ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ (Eid Milad Procession) ವೇಳೆ ಕಲ್ಲು ತೂರಾಟ (Stone Pelting) ನಡೆಸಿರುವ ಘಟನೆ ಶಿವಮೊಗ್ಗದ (Shivamogga) ರಾಗಿಗುಡ್ಡ (Ragigudda) ಶಾಂತಿನಗರದಲ್ಲಿ ನಡೆದಿದೆ. 2 ಗುಂಪಿನ ನಡುವೆ ಕಲ್ಲು ತೂರಾಟ ನಡೆದು, 6 ಮಂದಿ ಗಾಯಗೊಂಡಿದ್ದಾರೆ. 7 ಮನೆ, 1 ಕಾರು, 1 ಬೈಕ್ ಜಖಂಗೊಂಡಿವೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. 35 ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈದ್ ಮಿಲಾದ್ ಹಬ್ಬದ ಅಂಗವಾಗಿ ಶಿವಮೊಗ್ಗದಲ್ಲಿ ಮುಸ್ಲಿಂ ಬಾಂಧವರು ಮೆರವಣಿಗೆ ಹಮ್ಮಿಕೊಂಡಿದ್ದರು. ಕಳೆದ 28ನೇ ದಿನದಂದು ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಮೆರವಣಿಗೆ ಇದ್ದಿದ್ದರಿಂದ, ಈದ್ ಮಿಲಾದ್ ಮೆರವಣಿಗೆಯನ್ನು ನಿನ್ನೆಗೆ (ಭಾನುವಾರ) ಮುಸ್ಲಿಂ ಮುಖಂಡರು ಹಮ್ಮಿಕೊಂಡಿದ್ದರು. ಹೀಗಾಗಿ ಈದ್ ಮಿಲಾದ್ ಮೆರವಣಿಗೆಗೆ ಇಡೀ ಶಿವಮೊಗ್ಗ ನಗರವನ್ನು ಹಸಿರುಮಯ ಮಾಡಲಾಗಿತ್ತು. ಹಸಿರು ಬಾವುಟ, ಟಿಪ್ಪು ಸುಲ್ತಾನ್, ಔರಂಗಜೇಬ್ ಕಟೌಟ್ ಹಾಕಿದ್ದರು.
Advertisement
Advertisement
ನಿನ್ನೆ ಸರಿಸುಮಾರು ಮಧ್ಯಾಹ್ನ 3 ಗಂಟೆಗೆ ಗಾಂಧಿ ಬಜಾರಿನ ಜಾಮೀಯಾ ಮಸೀದಿಯಿಂದ ಮೆರವಣಿಗೆ ಆರಂಭವಾಗಿತ್ತು. ಮೆರವಣಿಗೆಯಲ್ಲಿ ಭಾಗವಹಿಸಲು ನಗರದ ಎಲ್ಲಾ ಬಡಾವಣೆಗಳಿಂದ ಮುಸ್ಲಿಂ ಬಾಂಧವರು ಆಗಮಿಸಿದರು. ರಾಗಿಗುಡ್ಡದಿಂದಲೂ ಮೆರವಣಿಗೆಯಲ್ಲಿ ಭಾಗಿಯಾಗಲು ಕೆಲ ಮುಸ್ಲಿಂ ಬಾಂಧವರು ತೆರಳುತ್ತಿದ್ದರು. ಈ ವೇಳೆ ರಾಗಿಗುಡ್ಡದ ಶನೇಶ್ವರ ದೇವಸ್ಥಾನದ ಬಳಿ ಮೆರವಣಿಗೆ ಸಾಗುವಾಗ ಕಲ್ಲು ತೂರಾಟ ನಡೆದಿದೆ. ಈ ವೇಳೆ ಪ್ರತಿಯಾಗಿ ಮೆರವಣಿಗೆಯಲ್ಲಿ ಇದ್ದವರು ಕಲ್ಲು ತೂರಾಟ ನಡೆಸಿದರು. ಪರಿಣಾಮ ಹಿಂದೂಗಳಿಗೆ ಸೇರಿದ 7 ಮನೆಗಳು ಹಾಗೂ 1 ಬೈಕ್, 1 ಕಾರು ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆ ಪ್ರಕರಣ – ಇಬ್ಬರು ಮಹಿಳೆಯರು ಸೇರಿ ನಾಲ್ವರ ಬಂಧನ
Advertisement
ಭಾನುವಾರ ಮುಂಜಾನೆ ಕೂಡ ರಾಗಿಗುಡ್ಡದಲ್ಲಿ ಗೊಂದಲ ಉಂಟಾಗಿತ್ತು. ರಾಗಿಗುಡ್ಡದ ವೃತ್ತವೊಂದರಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ಹಾಕಿದ್ದರು. ಟಿಪ್ಪು ಸುಲ್ತಾನ್ ಇಬ್ಬರು ಹಿಂದೂ ಮಾದರಿಯ ಸೈನಿಕರನ್ನು ತುಳಿಯುತ್ತಿರುವ ರೀತಿ ಕಟೌಟ್ ಹಾಕಿದ್ದರು. ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪೊಲೀಸರು ಬಣ್ಣ ಹಚ್ಚಿ ಮುಚ್ಚಿದ್ದರು. ಇದಕ್ಕೆ ಮುಸ್ಲಿಮರು ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದರು. ನಂತರ ಸ್ಥಳಕ್ಕೆ ಎಸ್‌ಪಿ ಮಿಥುನ್ ಕುಮಾರ್ ಭೇಟಿ ನೀಡಿ ಮನವೊಲಿಸಿದ್ದರು.
Advertisement
ಇಷ್ಟಾದ ಮೇಲೂ ರಾಗಿಗುಡ್ಡದಿಂದ ಗಾಂಧಿ ಬಜಾರಿಗೆ ಮೆರವಣಿಗೆ ತೆರಳುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ. ಪ್ರತಿಯಾಗಿ ಮೆರವಣಿಗೆಯಲ್ಲಿ ಇದ್ದವರು ಕಲ್ಲು ತೂರಾಟ ನಡೆಸಿದರು. ಘಟನೆಯಲ್ಲಿ ಮನೆಯ ಕಿಟಕಿಗಳಿಗೆ, ವಾಹನಗಳಿಗೆ ಹಾನಿಯಾಗಿದೆ. ಪೊಲೀಸರು ಸೇರಿದಂತೆ 6 ಮಂದಿ ಗಾಯಗೊಂಡಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. ಸದ್ಯ ಕಲ್ಲು ತೂರಾಟ ನಡೆಸಿದವರ ಪತ್ತೆ ಹಚ್ಚಿ ಮನೆ ಮನೆಗೆ ತೆರಳಿ ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಪತ್ತೆಗೆ ಎಸ್‌ಪಿ 3 ವಿಶೇಷ ತಂಡ ರಚನೆ ಮಾಡಿದ್ದು, ಇದುವರೆಗೆ 11ಕ್ಕೂ ಅಧಿಕ ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಗಿಗುಡ್ಡ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಸದ್ಯ ಗಲಭೆ ನಡೆದ ಸ್ಥಳದಲ್ಲಿ ಆರ್‌ಎಎಫ್, ಡಿಎಆರ್, ಕೆಎಸ್‌ಆರ್‌ಪಿ ತುಕಡಿ ಸೇರಿದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಕಲ್ಲು ತೂರಾಟ; ಟಿಪ್ಪುವಿನ ಕಾರಣ ಬಲಿಷ್ಠವಾಗಿ ನಿಂತುಬಿಡ್ತು ಅನ್ನಿಸುತ್ತೆ ಎಂದ ಶಾಸಕ
Web Stories