ಮಂಡ್ಯ: ಸೆ.12ರ ನಂತರ ಕೇಂದ್ರ ಸಚಿವ, ಮಂಡ್ಯ (Mandya) ಸಂಸದ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಮದ್ದೂರಿಗೆ (Maddur) ಭೇಟಿ ನೀಡಲಿದ್ದಾರೆ.
ಸದ್ಯ ಹೆಚ್‌ಡಿ ಕುಮಾರಸ್ವಾಮಿ ಅವರು ದೆಹಲಿಯಲ್ಲಿದ್ದಾರೆ. ಶುಕ್ರವಾರ (ಸೆ.12) ಉಪರಾಷ್ಟ್ರಪತಿಗಳ (Vice President) ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆ ಕಾರ್ಯಕ್ರಮ ಮುಗಿಸಿಕೊಂಡು ಸೆ.12ರಂದೇ ಬೆಂಗಳೂರಿಗೆ (Bengaluru) ವಾಪಸ್ ಆಗಲಿದ್ದಾರೆ. ಬಳಿಕ ಮದ್ದೂರಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.ಇದನ್ನೂ ಓದಿ: ಇಂದು ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ – 20 ಸಾವಿರಕ್ಕೂ ಹೆಚ್ಚು ಜನ ಭಾಗಿ ಸಾಧ್ಯತೆ
ಮದ್ದೂರಿನಲ್ಲಿ ಗಣೇಶ ಮೆರವೆಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿನಿತ್ಯ ಎಸ್ಪಿ, ಡಿಸಿಯಿಂದ ಮಾಹಿತಿ ಪಡೆಯುತ್ತಿದ್ದಾರೆ.
ಮದ್ದೂರಿನಲ್ಲಿ ಆಗಿದ್ದೇನು?
ಮದ್ದೂರು ಪಟ್ಟಣದ ರಾಮ್ ರಹೀಂ ನಗರಕ್ಕೆ ಹೊಂದಿಕೊಂಡಿರುವ ಚನ್ನೇಗೌಡ ಬಡಾವಣೆಯ ನಿವಾಸಿಗಳು ಭಾನುವಾರ (ಸೆ.7) ರಾತ್ರಿ ಗಣಪತಿ ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ ಮಸೀದಿ ಬಳಿಗೆ ಮೆರವಣಿಗೆ ಬಂದಿದ್ದು, ಯಾವುದೇ ಘೋಷಣೆ ಕೂಗಬಾರದು, ಮೈಕ್ ಹಾಕಬಾರದು ಎಂದು ಎಚ್ಚರಿಕೆ ನೀಡಿದ್ದರು. ಅದರಂತೆ ಮೈಕ್ ಆಫ್ ಮಾಡಿ ಮೆರವಣಿಗೆ ಮಾಡಲಾಗಿತ್ತು. ಇದಾದ ಬಳಿಕ ಲೈಟ್ ಆಫ್ ಮಾಡಿ ಏಕಾಏಕಿ ಗಣಪತಿ ಮೆರವಣಿಗೆಗೆ ಅನ್ಯ ಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಇದನ್ನೂ ಓದಿ: ಈ ಜನ್ಮದಲ್ಲೇ ಮುಸ್ಲಿಂ ಧರ್ಮಕ್ಕೆ ಹೋಗಿಬಿಡಿ, ನಾವೇ ಹಾರ ಹಾಕಿ ಕಳುಹಿಸ್ತೇವೆ: ಶೋಭಾ ಕರಂದ್ಲಾಜೆ