– ಇವರ ಹಬ್ಬಕ್ಕೆ ನಾವು ಕಲ್ಲು ತೂರಿದ್ದೀವಾ?
ಮಂಡ್ಯ: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ (Madduru Ganesh Procession) ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಗಣಪತಿ ಮೆರವಣಿಗೆ ಮೇಲೆ ಅನ್ಯ ಕೋಮಿನ ಯುವಕರ ಗುಂಪು ಕಲ್ಲುತೂರಿದೆ.
ಕಳೆದ ವರ್ಷ ಇದೇ ಸಂದರ್ಭದಲ್ಲಿ ಮಂಡ್ಯದ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲುತೂರಾಟ (Stone Pelting) ಮಾಡಲಾಗಿತ್ತು. ಈ ವೇಳೆ ಕೋಟ್ಯಾಂತರ ರೂ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿತ್ತು. ಇದೀಗ ಅಂತಹುದೆ ಘರ್ಷಣೆ ಪರಿಸ್ಥಿತಿ ಎದುರಾಗಿದ್ದು, ತಕ್ಷಣವೇ ಎಚ್ಚೆತ್ತ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಭಾನುವಾರ ರಾತ್ರಿ ಮದ್ದೂರಿನ ಬೀದಿಗಳಲ್ಲಿ ಗಣಪತಿ ಮೆರವಣಿ ನಡೆಸುತ್ತಿದ್ದರು. ಈ ವೇಳೆ ಮಸೀದಿ ಬಳಿಗೆ ಮೆರವಣಿಗೆ ಬಂದಿದ್ದು ಈ ವೇಳೆ ಗಣಪತಿ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಿದ್ದಾರೆ. ಈ ವೇಳೆ ಕಲ್ಲು ತೂರಿದವರ ಮೇಲೆ ಪ್ರತಿಯಾಗಿ ಕಲ್ಲು ತೂರಿದ್ದಾರೆ. ಈ ವೇಳೆ ನಾಲ್ವರು ಹೋಮ್ ಗಾರ್ಡ್ ಸೇರಿದಂತೆ ಎಂಟು ಮಂದಿಗೆ ಗಾಯವಾಗಿದೆ.
ರಾತ್ರಿ 7.30ರ ಸಂಧರ್ಭದಲ್ಲಿ ಈ ಗಲಾಟೆ ನಡೆದಿದೆ. ಮೊದಲಿಗೆ ಪ್ರಮುಖ ಬೀದಿಗಳಲ್ಲಿ ಗಣಪತಿ ಮೆರವಣಿಗೆ ನಡೆಸಿದ್ದಾರೆ. ಈ ವೇಳೆ ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು, ಮೈಕ್ ಹಾಕಬಾರದು ಎಂದು ಎಚ್ಚರಿಕೆ ನೀಡಿದ್ದರಂತೆ. ಅದರಂತೆ ಮೈಕ್ ಆಫ್ ಮಾಡಿ ಮೆರವಣಿಗೆ ಮಾಡಲಾಗಿತ್ತು. ಇದಾದ ಬಳಿಕ ಲೈಟ್ ಆಫ್ ಮಾಡಿ ಏಕಾಏಕಿ ಗಣಪತಿ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಾಟ ಮಾಡಲಾಗಿದೆ. ಕಲ್ಲು ತೂರಾಟದಿಂದ ಕ್ಷಣಕಾಲ ಗಾಬರಿಗೊಂಡ ಯುವಕರು ಕಲ್ಲು ತೂರಿದ ಕಡೆಗೆ ಇವರು ಕಲ್ಲು ಎಸೆದಿದ್ದಾರೆ.
ನಾವು ಸುಮ್ಮನಿದ್ದರೂ ನಮ್ಮ ಮೇಲೆ ಈ ರೀತಿ ದಾಳಿ ಮಾಡಿದ್ದಾರೆ. ಮೊನ್ನೆ ಮೊನ್ನೆಯಷ್ಟೆ ಅವರ ಹಬ್ಬ ಮಾಡಿದಾಗ ನಾವು ಗಲಾಟೆ ಮಾಡಿದ್ದವ ಎಂದು ಹಿಂದೂ ಯುವಕರು ಪ್ರಶ್ನೆ ಮಾಡುತ್ತಿದ್ದಾರೆ.
ಒಂದು ವರ್ಷದ ಹಿಂದೆ ನಡೆದಿದ್ದ ನಾಗಮಂಗಲ ಗಲಾಟೆ ಮಾಸುವ ಮುನ್ನವೇ ಮತ್ತೊಂದು ಅದೇ ರೀತಿಯ ಘಟನೆ ಮರುಕಳಿಸಿದ್ದು, ಸದ್ಯ ಪರಿಸ್ಥಿತಿ ಮಾತ್ರ ಬೂದಿಮುಚ್ಚಿದ ಕೆಂಡದಂತಿದೆ.