ಗಾಂಧಿನಗರ: ಗುಜರಾತ್‌ನ ವಡೋದರಾದಲ್ಲಿ ಸೋಮವಾರ ರಾತ್ರಿ ಗಣೇಶನ ಮೂರ್ತಿಯನ್ನು ಹೊತ್ತ ಮೆರವಣಿಗೆ ಸೂಕ್ಷ್ಮ ಪ್ರದೇಶದಲ್ಲಿ ಸಾಗುತ್ತಿದ್ದಾಗ ಎರಡು ಸಮುದಾಯದವರು ಪರಸ್ಪರ ಕಲ್ಲುತೂರಾಟ ನಡೆಸಿರುವುದಾಗಿ ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ 13 ಜನರನ್ನು ಬಂಧಿಸಲಾಗಿದೆ.
ಎರಡು ಸಮುದಾಯದವರ ನಡುವೆ ಘರ್ಷಣೆ ನಡೆಯುತ್ತಿದ್ದಂತೆ ಎರಡೂ ಕಡೆಯವರ ವಿರುದ್ಧ ವಡೋದರಾ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 13 ಜನರನ್ನು ಬಂಧಿಸಿದ್ದಾರೆ. ಸದ್ಯ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸ್ ಠಾಣೆಯಲ್ಲೇ ಮಹಿಳೆಯೊಂದಿಗೆ ಚಕ್ಕಂದ – ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ASI
Advertisement
Advertisement
ವರದಿಗಳ ಪ್ರಕಾರ ಕೋಮು ಸೂಕ್ಷ್ಮ ಪ್ರದೇಶ ಮಾಂಡವಿಯ ಪಾಣಿಗೇಟ್ ದರ್ವಾಜಾ ಮೂಲಕ ರಾತ್ರಿ 11:15ರ ವೇಳೆಗೆ ಗಣೇಶನ ಮೂರ್ತಿ ಹೊತ್ತು ಮೆರವಣಿಗೆ ಸಾಗುತ್ತಿತ್ತು. ಈ ವೇಳೆ ಯಾವುದೋ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಬಳಿಕ 2 ಸಮುದಾಯದ ಸದಸ್ಯರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಹತ್ತಿರದ ಮಸೀದಿಯೊಂದರ ಮುಖ್ಯ ದ್ವಾರದ ಗಾಜಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವರದಕ್ಷಿಣೆಗಾಗಿ ಸೊಸೆಯನ್ನು ಹೊರಹಾಕಿದವರ ಮನೆ ಮುಂದೆ ಘರ್ಜಿಸಿತು ಬುಲ್ಡೋಜರ್ – ಮುಂದೇನಾಯ್ತು?
Advertisement
ಬಳಿಕ ಕಾನೂನು ಸುವ್ಯವಸ್ಥೆ ಹತೋಟಿಗೆ ತರಲು ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಗಣೇಶನ ಮೂರ್ತಿಯನ್ನು ಶಾಂತಯುತವಾಗಿ ಗಮ್ಯ ಸ್ಥಳಕ್ಕೆ ಕೊಂಡೊಯ್ಯಲಾಯಿತು ಎನ್ನಲಾಗಿದೆ.