ಮಂಗಳೂರು: ನಗರದ ಹೊರವಲಯದಲ್ಲಿರುವ ಮಸೀದಿ ಮೇಲಿರುವ ಕಲ್ಲು ತೂರಾಟ ನಡೆಸಿರುವ ಘಟನೆ ಜಿಲ್ಲೆಯ ಸುರತ್ಕಲ್ (Suratkal) ಬಳಿಯ ಕಾಟಿಪಳ್ಳ (Katipalla) 3ನೇ ಬ್ಲಾಕಿನ ಬದ್ರಿಯಾ ಮಸೀದಿಯಲ್ಲಿ ನಡೆದಿದೆ.
ಮಂಗಳೂರು (Mangaluru) ಹೊರವಲಯದ ಕಾಟಿಪಳ್ಳ 3ನೇ ಬ್ಲಾಕಿನ ಬದ್ರಿಯಾ ಮಸೀದಿ ಮೇಲೆ ದುಷ್ಕರ್ಮಿಗಳ ತಂಡವೊಂದು ಕಲ್ಲು ತೂರಾಟ ನಡೆಸಿದೆ. ಬೈಕ್‌ನಲ್ಲಿ ಆಗಮಿಸಿ ಕಲ್ಲು ತೂರಾಟ ಮಾಡಿದ್ದಾರೆ. ಕಲ್ಲಿನ ಹೊಡೆತಕ್ಕೆ ಮಸೀದಿಯ ಗಾಜು ಒಡೆದು ಚೂರಾಗಿದೆ. ತಡರಾತ್ರಿ 2 ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.ಇದನ್ನೂ ಓದಿ: ಕಲಬುರಗಿಯಲ್ಲಿ ದಶಕದ ಬಳಿಕ ಸಚಿವ ಸಂಪುಟ ಸಭೆ – ಮಿನಿವಿಧಾನಸೌಧದಲ್ಲಿ ಸರ್ಕಾರದಿಂದ ಭರ್ಜರಿ ಸಿದ್ಧತೆ!
ಸದ್ಯ ಸ್ಥಳದಲ್ಲಿ ಸುರತ್ಕಲ್ ಠಾಣಾ ಪೊಲೀಸರು ಬಂದುಬಸ್ತ್ ಮಾಡಿದ್ದಾರೆ.
ಭಜರಂಗದಳ-ವಿಹೆಚ್‌ಪಿಯಿಂದ ಬಿ.ಸಿ.ರೋಡ್ ಚಲೋ ಕರೆ:
ಮತ್ತೊಂದೆಡೆ ಭಜರಂಗದಳ ಹಾಗೂ ವಿಹೆಚ್‌ಪಿಯಿಂದ ಬಿ.ಸಿ.ರೋಡ್ (BC Road) ಚಲೋ ಕರೆ ಹಿನ್ನಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಬಿ.ಸಿ.ರೋಡ್‌ನಲ್ಲಿ ಜಮಾಯಿಸಿದ್ದಾರೆ. ಬಿ.ಸಿ.ರೋಡ್‌ನ ರಕ್ತೇಶ್ವರಿ ದೇವಸ್ಥಾನದ ಎದುರು ಸೇರಿದ ಕಾರ್ಯಕರ್ತರು ನಾವು ಸವಾಲು ಸ್ವೀಕರಿಸಿ ಬಂದಿದ್ದೇವೆ. ನಮ್ಮ ಮುಖಂಡ ಶರಣ್ ಪಂಪ್ವೆಲ್ ಬರುತ್ತಾರೆ ಅವರಿಗೆ ಸ್ವಾಗತ ಕೋರಲು ಬಂದಿರೋದಾಗಿ ವಿಹೆಚ್‌ಪಿ ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ತಿಳಿಸಿದ್ದಾರೆ.ಇದನ್ನೂ ಓದಿ: ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ – ಆತಂಕ ಹೆಚ್ಚಿಸಿದ ಆ ಒಂದು ರೈಫಲ್, ದಾಳಿಕೋರ ಸಿಕ್ಕಿದ್ದು ಹೇಗೆ?