ರಾಮನಗರ: ಚುನಾವಣೆ (Elections) ಹತ್ತಿರವಾಗ್ತಿದ್ದಂತೆ ರಾಮನಗರದಲ್ಲಿ ರಾಜಕೀಯ ಪಕ್ಷಗಳ (Political Party) ನಡುವೆ ಕಿತ್ತಾಟ ಜೋರಾಗಿದೆ. ಈ ಮಧ್ಯೆ ಬುಧವಾರ ಕಾಂಗ್ರೆಸ್-ಜೆಡಿಎಸ್ (Congress – JDS) ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದ್ದು, ಮಾಜಿ ಶಾಸಕ ಹೆಚ್.ಸಿ ಬಾಲಕೃಷ್ಣ (HC Balakrishna) ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ. ಆದರೆ ಬಾಲಕೃಷ್ಣ ಅವರು ಈ ಗಲಾಟೆಗೆ ಸಚಿವ ಅಶ್ವಥ್ ನಾರಾಯಣ (Ashwath Narayan) ಸಂಬಂಧಿ ಶ್ರೀಧರ್ ಕಾರಣ ಎಂದು ದೂರಿದ್ದಾರೆ.
ಈ ಹಿಂದೆ ಅನುದಾನದ ವಿಚಾರವಾಗಿ ಜೆಡಿಎಸ್ (JDS) ಹಾಗೂ ಬಿಜೆಪಿ (BJP) ಕಾರ್ಯಕರ್ತರ ನಡುವೆ ಗಲಾಟೆ ನಡೆದು ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ (CP Yogeshwar) ಕಾರಿನ ಮೇಲೆ ಜೆಡಿಎಸ್ (JDS) ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದರು. ಇದೀಗ ಮತ್ತೆ ಮಾಗಡಿ ತಾಲೂಕಿನ ಕಾಮಸಾಗರ ಗ್ರಾಮದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ. ಇದನ್ನೂ ಓದಿ: ವಿಶ್ವ ನಾಯಕರ ಪಟ್ಟಿಯಲ್ಲಿ ಭಾರತೀಯರ ಪಾರುಪತ್ಯ – ರಿಷಿ ಸುನಾಕ್ ನೂತನ ಎಂಟ್ರಿ
ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ವಿಚಾರವಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರ ನಡುವೆ ಗಲಾಟೆ ನಡೆದಿದೆ. ಕಾರ್ಯಕ್ರಮದ ಬ್ಯಾನರ್‌ನಲ್ಲಿ ಶಾಸಕ ಮಂಜುನಾಥ್ ಹೆಸರನ್ನು ಕೊನೆಯಲ್ಲಿ ಹಾಕಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ಜೆಡಿಎಸ್ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. ಇದರ ಮಧ್ಯೆ ಬಾಲಕೃಷ್ಣ ಕಟ್ಟಡ ಉದ್ಘಾಟಿಸಿ ಕಾರಿನಲ್ಲಿ ವಾಪಸ್ ಆಗುತ್ತಿರುವಾಗ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕುದೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಇದನ್ನೂ ಓದಿ: UK ಪ್ರಧಾನಿಯಾದ ರಿಷಿ ಸುನಾಕ್ – ಸಾಮಾಜಿಕ ಜಾಲತಾಣದಲ್ಲಿ ಆಶಿಶ್ ನೆಹ್ರಾ ಫೋಟೋ ಟ್ರೆಂಡ್
ಈ ಬಗ್ಗೆ ಮಾತನಾಡಿರುವ ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ (HC Balakrishna), ಶಿಷ್ಟಾಚಾರದ ಪ್ರಕಾರವೇ ಕಾರ್ಯಕ್ರಮ ಉದ್ಘಾಟನೆಯಾಗಿದೆ. ಗಲಾಟೆಗೆ ಸಚಿವ ಅಶ್ವಥ್ ನಾರಾಯಣ ಸಂಬಂಧಿ ಶ್ರೀಧರ್ ಕಾರಣ. ಶ್ರೀಧರ್ ತನ್ನ ಪಟಾಲಂ ಕಟ್ಟಿಕೊಂಡು ಬಂದು ಗಲಾಟೆ ಮಾಡಿದ್ದಾನೆ. ಗಲಾಟೆ ಮಾಡಿದವರು ಕಾಂಗ್ರೆಸ್, ಜೆಡಿಎಸ್‌ನವರು ಅಲ್ಲ. ಅವರೆಲ್ಲ ಬಿಜೆಪಿ ಮುಖಂಡರು ಎಂದು ದೂರಿದ್ದಾರೆ.