ತುಮಕೂರು: ಶಾಲೆಯ (School) ವಿದ್ಯಾರ್ಥಿನಿಯರ ಶೌಚಾಲಯದ ಮೇಲೆ ಪುಂಡರು ಕಲ್ಲು ತೂರಾಟ ನಡೆಸಿದ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿ (Huliyar) ನಡೆದಿದೆ. ಈ ವೇಳೆ ಪ್ರಶ್ನಿಸಿದ ವಿದ್ಯಾರ್ಥಿಗೆ (Students) ಪುಂಡರ ಗುಂಪು ಹಿಗ್ಗಾಮುಗ್ಗ ಥಳಿಸಿದೆ.
ಮಹಬೂಬ್ ಷರೀಫ್ ಹಾಗೂ ಆತನ ಸಹಚರರು ಹುಳಿಯಾರು ಸರ್ಕಾರಿ ಶಾಲೆಯ ಬಾಲಕಿಯರ ಶೌಚಾಲಯದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ 10ನೇ ತರಗತಿ ವಿದ್ಯಾರ್ಥಿಯೊಬ್ಬ, ಏಕೆ ಕಲ್ಲು ಎಸೆಯುತ್ತೀರಿ ಎಂದು ಪ್ರಶ್ನಿಸಿದ್ದಾನೆ. ಇದರಿಂದ ಕೆರಳಿದ ಪುಂಡರು ದೊಣ್ಣೆಯಿಂದ ಬಾಲಕನ ಮೇಲೆ ತೀವ್ರ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿಯ ಬೆನ್ನು ಹಾಗೂ ತಲೆಗೆ ತೀವ್ರ ಪೆಟ್ಟಾಗಿದ್ದು, ಆತನಿಗೆ ಚಿಕ್ಕನಾಯಕನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಈ ಸಂಬಂಧ 7 ಜನರ ವಿರುದ್ಧ ದೂರು ದಾಖಲಾಗಿದೆ. ಈ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದಾರೆ.