– ನಾಳೆಯವರೆಗೆ ಮದ್ದೂರು ಪಟ್ಟಣದಲ್ಲಿ ನಿಷೇಧಾಜ್ಞೆ
– ಭಾನುವಾರ ರಾತ್ರಿ ವಿಸರ್ಜನೆ ವೇಳೆ ಕಲ್ಲು ತೂರಾಟ
ಮಂಡ್ಯ: ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿಂದೂ (Hindu) ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ (Lathi- Charged) ಮಾಡಿದ್ದಾರೆ.
ಮದ್ದೂರು ಪಟ್ಟಣದ ರಾಮ್ ರಹೀಂ ನಗರಕ್ಕೆ ಹೊಂದಿಕೊಂಡಿರುವ ಚನ್ನೇಗೌಡ ಬಡಾವಣೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶಮೂರ್ತಿ ವಿಸರ್ಜನೆ (Ganesh Procession) ವೇಳೆ ಅನ್ಯ ಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದನ್ನು ಖಂಡಿಸಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಕಲ್ಲು – ನಾಳೆ ಬೆಳಗ್ಗೆಯವರೆಗೆ ಮದ್ದೂರಿನಲ್ಲಿ ನಿಷೇಧಾಜ್ಞೆ ಜಾರಿ
ನಿಷೇಧಾಜ್ಞೆ ನಡುವೆಗೆ ಮದ್ದೂರು ಪಟ್ಟಣದಲ್ಲಿ ಸ್ಥಳೀಯರು, ಮಹಿಳೆಯರು, ಮಕ್ಕಳು ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಾ ಕಲ್ಲು ತೂರಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿದರು. ಸ್ಥಳೀಯರ ಪ್ರತಿಭಟನೆಗೆ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಸದಸ್ಯರು ಸಾಥ್ ನೀಡಿದರು. ಡಿಜೆ ಸದ್ದಿಗೆ ಯುವಕರು ಕೈಯಲ್ಲಿ ಕೇಸರಿ ಬಾವುಟ ಹಿಡಿದು ನೃತ್ಯ ಮಾಡುತ್ತಿದ್ದರು. ಇದನ್ನೂ ಓದಿ: ಈ ಸ್ಥಳವನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಿದ್ದಾರೆ, ಸತ್ರೆ ತಮಟೆಯ ಶಬ್ಧ ಕೇಳಬಾರದು: ಮದ್ದೂರು ಮಹಿಳೆಯ ಆಕ್ರೋಶ
ಮದ್ದೂರು ಪಟ್ಟಣದ ಜಾಮಿಯಾ ಮಸೀದಿ ಬಳಿ ಪ್ರತಿಭಟನಾ ಮೆರವಣಿಗೆ ಆಗಮಿಸಿತು. ಈ ವೇಳೆ ಮಸೀದಿಯ ರಸ್ತೆಯಲ್ಲಿ ಕರ್ಪೂರ ಕಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಸೀದಿ ಮುಂದೆ ಡಿಜೆ ಹಾಕಿ ಹಿಂದೂ ಕಾರ್ಯಕರ್ತರು ನೃತ್ಯ ಮಾಡಲು ಆರಂಭಿಸಿದರು. ಮಸೀದಿ ಜಾಗ ಬಿಟ್ಟು ಹೋಗುವಂತೆ ಪೊಲೀಸರು ಈ ಸಂದರ್ಭದಲ್ಲಿ ಸೂಚಿಸಿದರು. ಆದರೆ ಹಿಂದೂ ಕಾರ್ಯಕರ್ತರು ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸ್ಥಳದಿಂದ ಕದಲಿಲ್ಲ. ಘೋಷಣೆ ಕೂಗುತ್ತಾ ಡ್ಯಾನ್ಸ್ ಮಾಡುತ್ತಿದ್ದಂತೆ ಪೊಲೀಸರು ಲಾಠಿ ಬೀಸಿದ್ದಾರೆ. ಲಾಠಿ ಬೀಸುತ್ತಿದ್ದಂತೆ ಯುವಕರು ದಿಕ್ಕಾಪಾಲಾಗಿ ಓಡಿದ್ದಾರೆ.