ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ ಯಾರು ಯಾವುದೇ ಪ್ರತಿಭಟನೆಗಳನ್ನು ನಡೆಸುವಂತಿಲ್ಲ.
ಶಬ್ದ ಮಾಲಿನ್ಯದ ಹಿನ್ನೆಲೆಯಲ್ಲಿ ದೆಹಲಿಯ ಜಂತರ್ ಮಂತರ್‍ನಲ್ಲಿ ಪ್ರತಿಭಟನೆಗಳನ್ನು ನಿಷೇಧಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್‍ಜಿಟಿ) ಆದೇಶ ಹೊರಡಿಸಿದೆ. ಪ್ರತಿಭಟನೆಗಳಿಗೆ ರಾಮಲೀಲಾ ಮೈದಾನ ಅಥಾನ ಅಜ್ಮೀರಿ ಗೇಟ್ ಪರ್ಯಾಯ ಜಾಗ ಕಲ್ಪಿಸುವಂತೆ ದೆಹಲಿ ಸರ್ಕಾರ ಮತ್ತು ಪಾಲಿಕೆಗೆ ಎನ್‍ಜಿಟಿ ಸೂಚಿಸಿದೆ.
Advertisement
ಈ ಆದೇಶ ಪ್ರಕಟವಾದ ಈ ಕ್ಷಣದಿಂದಲೇ ಈ ಸ್ಥಳದಲ್ಲಿ ಧ್ವನಿವರ್ಧಕಗಳನ್ನು ಬಳಸಿ ಯಾವುದೇ ಪ್ರತಿಭಟನೆ, ಧರಣಿ, ಜನರನ್ನು ಉದ್ದೇಶಿಸಿ ಯಾರು ಮಾತನಾಡಕೂಡದು ಎಂದು ಸೂಚಿಸಿದೆ.
Advertisement
ವರುಣ್ ಸೇಠ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಎನ್‍ಜಿಟಿ ಈ ಆದೇಶ ಹೊರಡಿಸಿದೆ. ಶಾಂತಿ ಮತ್ತು ಆರೋಗ್ಯ ಪೂರ್ಣ ವಾತಾವರಣದಲ್ಲಿ ಜೀವಿಸಬೇಕು. ಆದರೆ ಈ ಪ್ರತಿಭಟನೆಗಳಲ್ಲಿ ಬಳಸುವ ಧ್ವನಿವರ್ಧಕಗಳಿಂದ ನಿದ್ದೆ ಮಾಡುವ ಮತ್ತು ಬದುಕುವ ಹಕ್ಕನ್ನು ಉಲ್ಲಂಘಿಸಿದಂತಾಗುತ್ತದೆ. ಹೀಗಾಗಿ ಈ ಸ್ಥಳದಲ್ಲಿ ಶಾಂತಿ ನೆಲೆಸಬೇಕಾದರೆ ಪ್ರತಿಭಟನೆಗಳನ್ನು ನಿಷೇಧಿಸಬೇಕು ಎಂದು ಅರ್ಜಿಯಲ್ಲಿ ವರುಣ್ ಸೇಠ್ ಮನವಿ ಮಾಡಿಕೊಂಡಿದ್ದರು.