ಕೋಲಾರ: ಮದ್ಯವ್ಯಸನಿಗಳೇ ಬೇರೆ ಮದ್ಯಪ್ರಿಯರೇ ಬೇರೆ ಎನ್ನುವ ಮೂಲಕ ಮದ್ಯಪಾನಿಗಳ ಬಗ್ಗೆ ಸಚಿವ ಎಚ್.ನಾಗೇಶ್ ವಿಭಿನ್ನ ರೀತಿಯಲ್ಲಿ ವಿಶ್ಲೇಷಣೆ ನೀಡಿದ್ದಾರೆ.
Advertisement
ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜನರ ಸುರಕ್ಷತೆಗಾಗಿಯೇ ಮದ್ಯ ಬಂದ್ ತೀರ್ಮಾನ ಮಾಡಿದ್ದೇವೆ. ವೈದ್ಯರಿಂದ ಸಲಹೆ ಪಡೆದುಕೊಂಡು ಚಟವನ್ನು ಬಿಟ್ಡು ಬಿಡಿ ಎಂದು ಕಿವಿ ಮಾತು ಹೇಳಿದ್ರು. ತಾಳ್ಮೆ, ಚಟ ತ್ಯಜಿಸಿ ಕೌನ್ಸಿಲಿಂಗ್ ಮಾಡಿಸಿಕೊಳ್ಳಿ. ಮದ್ಯ ಬಿಟ್ಟು ಕುಟುಂಬದ ಜೊತೆ ಚೆನ್ನಾಗಿರಿ. ಇನ್ನೂ ಇದೆ ವೇಳೆ ಕಳ್ಳಬಟ್ಟಿ ಹತೋಟಿಗೆ ತರಲು ಕಠಿಣ ಕ್ರಮ ಜರುಗಿಸಲು ಸೂಚನೆ ನೀಡಲಾಗಿದೆ. ಮೇ-3 ವರೆಗೂ ಪ್ರಧಾನಿಗಳ ಮಾತಿಗೆ ಗೌರವಿಸಿ ಸಹಕರಿಸಿ ಎಂದು ಮದ್ಯಪ್ರಿಯರಿಗೆ ಸಲಹೆ ನೀಡಿದರು.
Advertisement
Advertisement
ಲಾಕ್‍ಡೌನ್ ಆದಾಗಿನಿಂದ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ಎಣ್ಣೆ ಸಿಗದೇ ಕುಡುಕರು ಮದ್ಯದಂಗಡಿಗಳಿಗೆ ಕನ್ನ ಹಾಕಿ ಹಣ ಮುಟ್ಟದೇ ತಮ್ಮ ಬ್ರ್ಯಾಂಡ್ ಕದ್ದು ತೆಗೆದುಕೊಂಡು ಹೋಗುತ್ತಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಮದ್ಯ ಸಿಗದ್ದಕ್ಕೆ ಇಬ್ಬರು ಸ್ಯಾನಿಟೈಸರ್ ಕುಡಿದು ಸಾವನ್ನಪ್ಪಿರುವ ವರದಿ ಆಗಿದೆ. ಬುಧವಾರ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಮಾಜಿ ಸಚಿವ, ಹೆಚ್.ವಿಶ್ವನಾಥ್, ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಬೇಕು. ಪ್ರತಿನಿತ್ಯ ನೀಡದಿದ್ದರೂ ವಾರದಲ್ಲಿ ಎರಡು ದಿನ ಎಂಎಸ್‍ಐಎಲ್ ಸೇರಿದಂತೆ ಬಾರ್ ಗಳಲ್ಲಿ ಪಾರ್ಸಲ್ ವ್ಯವಸ್ಥೆ ಕಲ್ಪಿಸಬೇಕೆಂದು ಸರ್ಕಾರಕ್ಕೆ ಸಲಹೆ ನೀಡಿದ್ದರು.