ಬೆಂಗಳೂರು/ರಾಮನಗರ: ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಎಚ್ಚೆತ್ತಿದೆ. ಮೇಕೆದಾಟು ಪಾದಯಾತ್ರೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗುವುದು ಬೇಡ, ಅನಿವಾರ್ಯತೆ ಬಂದ್ರೆ ಪಾದಯಾತ್ರೆ ನಿಲ್ಲಿಸಿ ಎಂದು ರಾಜ್ಯ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ.
ಇಂದು ಬೆಳಿಗ್ಗೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಇಬ್ಬರ ಜೊತೆಗೂ ಕರೆ ಮಾಡಿ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಮೇಕೆದಾಟು ಪಾದಯಾತ್ರೆಯಿಂದ ರಾಷ್ಟ್ರ ಮಟ್ಟದಲ್ಲಿ ಡ್ಯಾಮೇಜ್ ಆಗಬಹುದು. ಪಾದಯಾತ್ರೆ ಬಗ್ಗೆ ನಾವು ಇಲ್ಲಿ ಉತ್ತರಿಸಬೇಕಾಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆಗೆ ಕೊರೊನಾ ಪಾಸಿಟಿವ್
Advertisement
Advertisement
ಕೊರೊನಾ ಸಂದರ್ಭದಲ್ಲಿ ಇಂತಹ ಯಾತ್ರೆ ಸೂಕ್ತವೂ ಅಲ್ಲ. ಪರಿಸ್ಥಿತಿ ನೋಡಿಕೊಂಡು ಪಾದಯಾತ್ರೆ ಮುಂದುವರಿಸಬೇಕಾ ಬೇಡವಾ ಎಂಬ ತೀರ್ಮಾನ ತೆಗೆದುಕೊಳ್ಳಲು ಸೂಚನೆ ನೀಡಿದೆ.
Advertisement
ನಮ್ಮ ನೀರು, ನಮ್ಮ ಹಕ್ಕು ಎಂಬ ಘೋಷಣೆಯಡಿ ಆರಂಭವಾಗಿರುವ ಕಾಂಗ್ರೆಸ್ ಪಾದಯಾತ್ರೆ ನಿನ್ನೆ ರಾತ್ರಿ ರಾಮನಗರ ತಲುಪಿತ್ತು. ಹೈಕೋರ್ಟ್ ಪಾದಯಾತ್ರೆ ವಿಚಾರದಲ್ಲಿ ಗರಂ ಆಗಿದ್ದ ಹಿನ್ನೆಲೆಯಲ್ಲಿ ನಿನ್ನೆಯೇ ರಾಜ್ಯ ಸರ್ಕಾರ ಪಾದಯಾತ್ರೆಗೆ ಬ್ರೇಕ್ ಹಾಕಿ ಆದೇಶ ಹೊರಡಿಸಿತ್ತು. ಆದರೂ ನಿನ್ನೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮುಂದುವರಿಯಲಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಪಾದಯಾತ್ರೆ ತಡೆಯಲು ಯಾರಿಗೆ ಕಾಯುತ್ತಿದ್ದೀರಿ – ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ