ನವದೆಹಲಿ: ಕಳೆದ ಕೆಲವು ದಿನಗಳಿಂದ ಸ್ಪೈಸ್‌ಜೆಟ್ ವಿಮಾನಗಳು ಪ್ರಯಾಣದ ಸಂದರ್ಭದಲ್ಲಿ ಹಲವು ಬಾರಿ ತಾಂತ್ರಿಕ ದೋಷಗಳನ್ನು ಎದುರಿಸಿವೆ. ಘಟನೆಗಳು ಒಂದೊಂದಾಗಿ ವರದಿಯಾಗುತ್ತಿದ್ದಂತೆ ಪ್ರಯಾಣಿಕರಲ್ಲಿ ನಡುಕವೂ ಉಂಟಾಗಿದೆ. ಈ ಹಿನ್ನೆಲೆ ಸ್ಪೈಸ್‌ಜೆಟ್ ವಿಮಾನ ಹಾರಾಟವನ್ನು ನಿಲ್ಲಿಸುವಂತೆ ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಇತ್ತೀಚೆಗೆ ಸ್ಪೈಸ್‌ಜೆಟ್ ವಿಮಾನಗಳಲ್ಲಿ ಅನೇಕ ಅಹಿತಕರ ಘಟನೆಗಳು ಸಂಭವಿಸಿವೆ. ವಿಮಾನ ಸಂಸ್ಥೆ ಸರಿಯಾಗಿ ಕಾರ್ಯ ನಿರ್ವಹಿಸುತ್ತಿದೆಯೇ ಇಲ್ಲವೇ ಎಂಬುದರ ಕುರಿತು ತನಿಖೆ ನಡೆಸಲು ಆಯೋಗ ರಚಿಸಲು ಮನವಿಯಲ್ಲಿ ಕೋರಲಾಗಿದೆ ಎಂದು ವಕೀಲ ರಾಹುಲ್ ಭಾರದ್ವಾಜ್ ತಿಳಿಸಿದ್ದಾರೆ. ಇದನ್ನೂ ಓದಿ: ಉಪರಾಷ್ಟ್ರಪತಿ ಹುದ್ದೆಗೆ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಮಂಗಳೂರು ಮೂಲದ ಮಾರ್ಗರೇಟ್ ಆಳ್ವಾ ಆಯ್ಕೆ
Advertisement
Advertisement
ಜೂನ್ 19 ರಿಂದ ಇಲ್ಲಿಯವರೆಗೆ 9 ಬಾರಿ ಸ್ಪೈಸ್‌ಜೆಟ್ ವಿಮಾನಗಳಲ್ಲಿ ತಾಂತ್ರಿಕ ದೋಷಗಳು ಕಂಡುಬಂದಿದ್ದು, ಈ ಹಿನ್ನೆಲೆ ಜುಲೈ 6 ರಂದು ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಸ್ಪೈಸ್‌ಜೆಟ್‌ಗೆ ಶೋಕಾಸ್ ನೋಟೀಸ್ ನೀಡಿತ್ತು. ಇದೀಗ ಹೆಚ್ಚುತ್ತಿರುವ ಭೀತಿಯ ನಡುವೆ ಸ್ಪೈಸ್‌ಜೆಟ್ ವಿಮಾನ ಹಾರಾಟವನ್ನು ನಿಲ್ಲಿಸಬೇಕೆಂದು ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಮನವಿ ಮಾಡಲಾಗಿದೆ. ಇದನ್ನೂ ಓದಿ: ಬುಡಕಟ್ಟು ವಿರೋಧಿ ಎಂದು ಬ್ಯಾನರ್ಜಿ ವಿರುದ್ಧ 50,000 ಪೋಸ್ಟರ್ ಹಾಕಿದ ಬಿಜೆಪಿ
Advertisement
ಸುರಕ್ಷಿತ, ದಕ್ಷ ಹಾಗೂ ವಿಶ್ವಾಸಾರ್ಹ ವಿಮಾನ ಸೇವೆಗಳನ್ನು ನೀಡುವಲ್ಲಿ ಸ್ಪೈಸ್‌ಜೆಟ್ ವಿಫಲವಾಗಿದೆ ಎಂದು ಡಿಜಿಸಿಎ ಹೇಳಿದೆ. ಡಿಜಿಸಿಎ ಶೋಕಾಸ್ ನೋಟೀಸ್‌ಗೆ ಪ್ರತಿಕ್ರಿಯೆ ನೀಡಲು ಸ್ಪೈಸ್‌ಜೆಟ್‌ಗೆ 3 ವಾರಗಳ ಕಾಲಾವಕಾಶವನ್ನು ನೀಡಿದೆ. ಡಿಜಿಸಿಎ ಶೋಕಾಸ್ ನೋಟಿಸ್ ಬಳಿಕ ಸ್ಪೈಸ್‌ಜೆಟ್ ಅಧ್ಯಕ್ಷ ಅಜಯ್ ಸಿಂಗ್ ಸ್ಪೈಸ್‌ಜೆಟ್‌ನಲ್ಲಿ ಪ್ರಯಾಣ ಮಾಡಲು ಶೇ.100 ರಷ್ಟು ಸುರಕ್ಷಿತವಾಗಿದೆ ಎಂದು ಹೇಳಿದ್ದರು.