ಬೆಂಗಳೂರು: ನಗರದ ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ನಟ ಜಗ್ಗೇಶ್ ಅವರು ನಟಿಸಿರುವ ರಿಯಾಲಿಟಿ ಶೋ, ಸಿನಿಮಾಗಳನ್ನು ಪ್ರಸಾರ ಮಾಡದಂತೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ.
ಯಶವಂತಪುರ ಕ್ಷೇತ್ರದಲ್ಲಿ ಜಗ್ಗೇಶ್ ಪ್ರತಿ ಸ್ಪರ್ಧಿಯಾಗಿರುವ ಕಾಂಗ್ರೆಸ್ ಪಕ್ಷ ಅಭ್ಯರ್ಥಿಯಾಗಿರುವ ಎಸ್ ಟಿ ಸೋಮಶೇಖರ್ ಅವರು ಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ತಮ್ಮ ದೂರಿನಲ್ಲಿ ಜಗ್ಗೇಶ್ ಅಭಿನಯ ಮಾಡಿರುವ ಚಿತ್ರಗಳು ಹಾಗೂ ಅವರ ರಿಯಾಲಿಟಿ ಶೋ ಗಳು ಮತದಾರರ ಮೇಲೆ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.
Advertisement
Advertisement
ಜಗ್ಗೇಶ್ ಅವರು ನಡೆಸಿಕೊಡುವ ರಿಯಾಲಿಟಿ ಶೋ ಗಳು ದೂರದರ್ಶನ, ಖಾಸಗಿ ವಾಹನಿ, ಸ್ಥಳೀಯ ಕೇಬಲ್ ನೆಟ್‍ವರ್ಕ್ ಮತ್ತು ಇತರೆ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಇದು ಚುನಾವಣೆ ನೀತಿ ಸಂಹಿತೆ ವಿರುದ್ಧವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಇಂತಹ ಕಾರ್ಯಕ್ರಮಗಳು ಪ್ರಸಾರ ಆಗುವುದರಿಂದ ಮತದಾರರ ಮೇಲೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಪ್ರಭಾವ ಬೀರುವ ಸಾಧ್ಯತೆ ಇದ್ದು, ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವರೆಗೂ ಜಗ್ಗೇಶ್ ಅವರ ಕಾರ್ಯಕ್ರಮಗಳು ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಬೇಕು ಎಂದು ಮನವಿ ಮಾಡಿದ್ದಾರೆ.
Advertisement
ಓಟವನ್ನು ತಡೆಯಲು ವಾಮಮಾರ್ಗ ಅನುಸರಿಸುವುದು ಇವರಿಗೆ ಹೊಸದೇನಲ್ಲ… ನಡೆಯಲಿ ರಾಯರಿದ್ದಾರೆ… ????
Karnataka People Slogan#JaggeshforYeshawanthapura #BJPforKarnataka https://t.co/9ahQfhK07C
— ನವರಸನಾಯಕ ಜಗ್ಗೇಶ್ (@Jaggesh2) April 28, 2018