ವಾಷಿಂಗ್ಟನ್: ಭಾರತ (India) ಮತ್ತು ಪಾಕಿಸ್ತಾನದ (Pakistan) ಮಧ್ಯೆ ನಡೆಯಬಹುದಾಗಿದ್ದ ಪರಮಾಣು ಸಂಘರ್ಷವನ್ನು (Nuclear Conflict) ನಾವು ನಿಲ್ಲಿಸಿದ್ದೇವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹೇಳಿದ್ದಾರೆ. ಈ ಮೂಲಕ ಮತ್ತೆ ಕದನ ವಿರಾಮದ ಕ್ರೆಡಿಟ್ ಪಡೆಯಲು ಮುಂದಾಗಿದ್ದಾರೆ.
ನಾವು ಪರಮಾಣು ಸಂಘರ್ಷವನ್ನು ನಿಲ್ಲಿಸಿದ್ದೇವೆ. ಅದು ಕೆಟ್ಟ ಪರಮಾಣು ಯುದ್ಧವಾಗಿರಬಹುದು ಎಂದು ನಾನು ಭಾವಿಸುತ್ತೇನೆ. ಲಕ್ಷಾಂತರ ಜನರು ಮೃತಪಡಬಹುದಿತ್ತು. ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಮತ್ತು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರ ಕೆಲಸಕ್ಕಾಗಿ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಅಣ್ವಸ್ತ್ರಗಳಿರೋ ಬೆಟ್ಟದ ಮೇಲೆ ದಾಳಿ – ಬೆದರಿದ ಪಾಕ್, ಅಮೆರಿಕಕ್ಕೂ ಶಾಕ್- ಕದನ ವಿರಾಮ ಘೋಷಣೆಗೆ ನಿಜವಾದ ಕಾರಣ ಏನು?
The Peace President, @realDonaldTrump on brokering a ceasefire:
“On Saturday, my Administration helped broker a full and immediate ceasefire — I think a permanent one — between India and Pakistan, ending a dangerous conflict of two nations with lots of nuclear weapons.” pic.twitter.com/hlTZlkmWpk
— Trump War Room (@TrumpWarRoom) May 12, 2025
ನಾವು ಪಾಕಿಸ್ತಾನದೊಂದಿಗೆ ಬಹಳಷ್ಟು ವ್ಯಾಪಾರ ಮಾಡಲಿದ್ದೇವೆ. ನಾವು ಭಾರತದೊಂದಿಗೆ ಬಹಳಷ್ಟು ವ್ಯಾಪಾರ ಮಾಡಲಿದ್ದೇವೆ. ನಾವು ಇದೀಗ ಭಾರತದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಶೀಘ್ರದಲ್ಲೇ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಲಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಅಣ್ವಸ್ತ್ರ ಸಂಗ್ರಹ ಇರೋ ಬೆಟ್ಟದ ಮೇಲೆ ದಾಳಿ ಚರ್ಚೆ – ಪತ್ರಕರ್ತನಿಗೆ ಥ್ಯಾಂಕ್ಸ್ ಹೇಳಿದ ವಾಯುಸೇನೆ