ಬೆಳಗಾವಿ: ಹೊಲವೊಂದರಲ್ಲಿ ವಿಚಿತ್ರವಾದ ಎಲೆಕ್ಟ್ರಾನಿಕ್ ಬಲೂನು (Electronic Balloon) ಪತ್ತೆಯಾಗಿರುವ ಘಟನೆ ಜಿಲ್ಲೆಯ ಗದ್ದಿಕರವಿನಕೊಪ್ಪ ಗ್ರಾಮದಲ್ಲಿ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿದೆ.
ಬೆಳಗಾವಿ (Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗದ್ದಿಕರವಿನಕೊಪ್ಪ ಗ್ರಾಮದಲ್ಲಿ ಬಿಳಿ ಬಣ್ಣದ ಎಲೆಕ್ಟ್ರಾನಿಕ್ ಬಲೂನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬಲೂನು ಎಲ್ಲಿಂದ, ಯಾವಾಗ ಹಾರಿ ಬಂದಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ಸ್ಥಳೀಯರಿಗೆ ಲಭ್ಯವಾಗಿಲ್ಲ. ಬಲೂನಿನಲ್ಲಿ ಕೆಲ ಎಲೆಕ್ಟ್ರಾನಿಕ್ ವಸ್ತುಗಳು ಪತ್ತೆಯಾಗಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: 1,487 ಗ್ರಾಂ ಚಿನ್ನ ಸಾಗಾಟ ಮಾಡ್ತಿದ್ದ ಏರ್ ಇಂಡಿಯಾ ಸಿಬ್ಬಂದಿ ಅರೆಸ್ಟ್
Advertisement
Advertisement
ಕೆಲ ದಿನಗಳ ಹಿಂದೆ ಅಮೆರಿಕದಲ್ಲಿ ಚೈನೀಸ್ ಸ್ಪೈ ಬಲೂನು ಸದ್ದು ಮಾಡಿತ್ತು. ಅದೇ ರೀತಿಯಲ್ಲಿ ಇಲ್ಲಿ ಕೂಡಾ ಬಲೂನನ್ನು ಹಾರಿಸಲಾಗಿದೆ ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಪಾರಿವಾಳದ ಕಾಲಿನಲ್ಲಿ ಕ್ಯಾಮೆರಾ – ಬೇಹುಗಾರಿಕೆ ಶಂಕೆ