ಚಿಕ್ಕೋಡಿ: ಬೀದಿನಾಯಿಗಳು (Stray Dog) ಪುರಸಭೆ ಸದಸ್ಯೆ (Municipal Council Member) ಮೇಲೆ ದಾಳಿ ಮಾಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಜರುಗಿದೆ.
ಹುಕ್ಕೇರಿ ಪುರಸಭೆ ವಾರ್ಡ್ ನಂ.16ರ ಸದಸ್ಯೆ ಡಲಾಯತ್ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಕೂಡಲೇ ಹುಕ್ಕೇರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಇದನ್ನೂ ಓದಿ: ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ
ಹುಕ್ಕೇರಿ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಗಲ್ಲಿ ಗಲ್ಲಿಗಳಲ್ಲಿ ಬೀದಿನಾಯಿಗಳ ಗುಂಪು ಸಾರ್ವಜನಿಕರ ಮೇಲೆ ದಾಳಿಗೆ ಮುಂದಾಗುತ್ತಿವೆ. ಚಿಕ್ಕ ಮಕ್ಕಳು, ವಯೋವೃದ್ಧರು ರಸ್ತೆಗಳಲ್ಲಿ ಓಡಾಡಲು ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಪುರಸಭೆ ಅಧಿಕಾರಿಗಳಿಗೆ ಹಲವು ಬಾರಿ ತಿಳಿಸಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಅಪಾರ್ಟ್‍ಮೆಂಟ್‍ನ 19ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು