ಗದಗ: ಲಕ್ಷ್ಮೇಶ್ವರ (Lakshmeshwar) ಪಟ್ಟಣದಲ್ಲಿ ಬೀದಿ ನಾಯಿಗಳ ( Stray Dog) ಹಾವಳಿ ಹೆಚ್ಚಾಗಿದ್ದು, ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿರುವುದರಿಂದ ಜನರು ಆತಂಕಗೊಂಡಿದ್ದಾರೆ.
ಜನರು ಹೆಚ್ಚಾಗಿ ಓಡಾಡುವ ರಸ್ತೆಗಳಲ್ಲೇ ಗುಂಪಾಗಿ ಬೀದಿ ನಾಯಿಗಳು ಓಡಾಡುತ್ತಿವೆ. ಇದರಿಂದ ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ದಿನನಿತ್ಯ ಓಡಾಡಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈಗಾಗಲೇ ಅನೇಕ ಮಂದಿಯ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ ಎನ್ನಲಾಗಿದೆ. ಹೀಗಾಗಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರು ಕೂಡ ಆತಂಕ ಪಡುತ್ತಿದ್ದಾರೆ. ಇದನ್ನೂ ಓದಿ: ವಿಜಯಪುರದಲ್ಲಿ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ
ಬೀದಿ ನಾಯಿಗಳ ಹಾವಳಿ ಕುರಿತು ಸಾರ್ವಜನಿಕರು ಈಗಾಗಲೇ ನಗರ ಪುರಸಭೆಗೆ ದೂರು ನೀಡಿದ್ದರೂ, ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಇದರಿಂದ ಪುರಸಭೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಿ, ಅವುಗಳನ್ನು ಸ್ಥಳಾಂತರಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.ಇದನ್ನೂ ಓದಿ: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೂ ಮುನ್ನ ಭದ್ರತಾಲೋಪ – ನಕಲಿ ಪಿಎಂಒ ಐಡಿ, ಬಂದೂಕು ಹೊಂದಿದ್ದ ಇಬ್ಬರು ವಶಕ್ಕೆ
