ರಾಯಚೂರು: ಮನೆಮುಂದೆ ಆಟವಾಡುತ್ತಿದ್ದ ಬಾಲಕನ (Boy) ಮೇಲೆ ಬೀದಿ ನಾಯಿಗಳು (Stray Dogs) ದಾಳಿ ನಡೆಸಿದ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನ (Raichur) ಮಲಿಯಾಬಾದ್ (Maliyabad) ಗ್ರಾಮದಲ್ಲಿ ನಡೆದಿದೆ.
4 ವರ್ಷದ ಬಾಲಕ ವೇಣುಗೋಪಾಲ್ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ದಾಳಿ ವೇಳೆ ನಾಯಿಗಳು ಬಾಲಕನ ತಲೆಯ ಭಾಗವನ್ನ ಸಂಪೂರ್ಣವಾಗಿ ಕಚ್ಚಿದೆ. ಈ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸದ್ಯ ಬಾಲಕನನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಸಿಕ್ಕಿಂನಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ – ಏಳು ಸಾವು, ಹಲವರು ಸಿಲುಕಿರುವ ಶಂಕೆ
ಬೀದಿ ನಾಯಿಗಳ ಹಾವಳಿಗೆ ಗ್ರಾಮದ ಪೋಷಕರು ಹೆದರಿದ್ದಾರೆ. ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಸಾರ್ವಜನಿಕರ ಗಮನಕ್ಕೆ – ಜು.22ರಂದು ಆನೇಕಲ್, ಸಮಂದೂರು ಭಾಗದಲ್ಲಿ ವಿದ್ಯುತ್ ವ್ಯತ್ಯಯ
