ಮಂಗಳೂರು: ಕಾರಿಗೆ (Car) ಡಿಕ್ಕಿಯಾದ ನಾಯಿ (Dog) ಕಾರಿನ ಬಂಪರಿನೊಳಗೆ ಸುಮಾರು 70 ಕಿಲೋಮೀಟರ್ ಸಾಗಿ ಕಾರ್ ನಿಲ್ಲಿಸಿದ ಬಳಿಕ ಪ್ರತ್ಯಕ್ಷವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ (Puttur) ನಡೆದಿದೆ.
ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ದಂಪತಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ (Kukke Subramanya Temple) ಭೇಟಿ ನೀಡಿ ಪುತ್ತೂರಿಗೆ ವಾಪಾಸಾಗುತ್ತಿದ್ದ ದಾರಿ ಮಧ್ಯೆ ಬಳ್ಪ ಎಂಬಲ್ಲಿ ನಾಯಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ತಕ್ಷಣವೇ ಸುಬ್ರಹ್ಮಣ್ಯ ಅವರು ಕಾರನ್ನು ನಿಲ್ಲಿಸಿದ್ದು, ಕಾರಿನ ಸುತ್ತಮುತ್ತ ನಾಯಿಗಾಗಿ ಹುಡುಕಾಡಿದ್ದಾರೆ. ಆದರೆ ನಾಯಿ ಅಲ್ಲಿಂದ ಎಲ್ಲಿ ಹೋಗಿದೆ ಎನ್ನುವುದನ್ನು ಊಹಿಸಲೂ ಸುಬ್ರಹ್ಮಣ್ಯ ಅವರಿಗೆ ಕಷ್ಟವಾಗಿತ್ತು. ಇದನ್ನೂ ಓದಿ: NIAಗೆ ತಾಲಿಬಾನ್ ಹೆಸರಲ್ಲಿ ಭಯೋತ್ಪಾದನಾ ದಾಳಿ ಸಂದೇಶ – ದೇಶಾದ್ಯಂತ ಹೈಅಲರ್ಟ್ ಘೋಷಣೆ
ಅಲ್ಲಿಂದ ನೇರವಾಗಿ ಕಬಕದ ತನ್ನ ಮನೆಗೆ ಬಂದು ಕಾರನ್ನು ಪರಿಶೀಲಿಸಿದಾಗ ಬಂಪರ್‌ನ ಗ್ರಿಲ್ ತುಂಡಾಗಿರುವುದು ಗಮನಕ್ಕೆ ಬಂದಿತ್ತು. ಇದನ್ನು ಗಮನಿಸಿದಾಗ ತುಂಡಾದ ಗ್ರಿಲ್ ಮಧ್ಯೆ 70 ಕಿ.ಮೀ ಹಿಂದೆ ಕಾರ್‌ಗೆ ಡಿಕ್ಕಿಯಾದ ನಾಯಿ ಪ್ರತ್ಯಕ್ಷವಾಗಿದೆ. ನಾಯಿಯನ್ನು ಬಂಪರ್ ಒಳಗಿಂದ ತೆಗೆಯಲಾಗದ ಸ್ಥಿತಿಯಲ್ಲಿದ್ದ ಕಾರಣ ಪಕ್ಕದ ಗ್ಯಾರೇಜ್‍ಗೆ ತೆರಳಿ ನಾಯಿಯನ್ನು ಹೊರ ತೆಗೆಯಲು ವಿನಂತಿಸಿದ್ದಾರೆ. ಗ್ಯಾರೇಜ್ ಸಿಬ್ಬಂದಿ ಬಂಪರ್ ಬಿಚ್ಚಿ ನಾಯಿಯನ್ನು ಸುರಕ್ಷಿತವಾಗಿ ಕಾರಿಂದ ಹೊರ ತೆಗೆದಿದ್ದಾರೆ. ಸುಮಾರು 70 ಕಿ.ಮೀ ವರೆಗೆ ಕಾರಿನ ಬಂಪರ್ ಒಳಗೇ ಇದ್ದ ನಾಯಿ ಆರಾಮವಾಗಿ ಹೊರಗೆ ಬಂದು ಇಳಿದು ಹೋಗಿದೆ. ಇದನ್ನೂ ಓದಿ: ಕೆಲಸ ಕೊಡಿಸುವ ಆಸೆ ತೋರಿಸಿ ಸೆಕ್ಸ್- ಟೆಕ್ಕಿ ಅರೆಸ್ಟ್
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k