ಹಾಸನ: ಮನೆಯ ಮುಂದೆ ಆಟವಾಡುತ್ತಿದ್ದ ಪುಟ್ಟ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಹಾಸನ ನಗರದ 30 ನೇ ವಾರ್ಡ್‍ನ ಮಿರ್ಜಾಮೊಹಲ್ಲಾದಲ್ಲಿ ನಡೆದಿದೆ.
ಬಾಲಕನ ಕೈ, ಬೆನ್ನು, ಕೆನ್ನೆ ಭಾಗಕ್ಕೆ ಕಚ್ಚಿದ್ದು ಬಾಲಕನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಿರ್ಜಾ ಮೊಹಲ್ಲಾ ಬಡಾವಣೆಯಲ್ಲಿ ಬೀದಿನಾಯಿಗಳ ಹಾವಳಿ ಮಿತಿಮೀರಿದ್ದು ಪ್ರತಿನಿತ್ಯ ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ. ಇದನ್ನೂ ಓದಿ: ಕುರಾನ್ ಗ್ರಂಥವನ್ನೇ ತಿರುಚಿ ಯುವಕರನ್ನು ಉಗ್ರ ಸಂಘಟನೆಗೆ ಸೇರಲು ಪ್ರಚೋದನೆ – ಬಯಲಾಯಿತು ಅಲ್ ಖೈದಾ ಪ್ಲಾನ್
ಮಕ್ಕಳು ಆಟ ಆಡುವಾಗ, ಶಾಲೆಯಿಂದ ಬರುವಾಗ ದಾಳಿ ಮಾಡುತ್ತಿವೆ. ಈ ಬಗ್ಗೆ ನಗರಸಭೆಗೆ ದೂರು ನೀಡಿದರೂ, ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇನ್ನಾದರೂ ನಗರಸಭೆ ಅಧಿಕಾರಿಗಳು ಶ್ವಾನಗಳ ಹಾವಳಿಗೆ ಕಡಿವಾಣ ಹಾಕುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: 6 ವರ್ಷ ತುಂಬಿದರಷ್ಟೇ 1ನೇ ಕ್ಲಾಸ್‌ಗೆ ಪ್ರವೇಶ – ಗೊಂದಲಕ್ಕೆ ಕಾರಣವಾದ ಆದೇಶ