ಸಾಂದರ್ಭಿಕ ಚಿತ್ರ
ಬೆಳಗಾವಿ: ನಾಯಿಗಳು ಮಗುವನ್ನೇ ತಿನ್ನಲು ಯತ್ನಿಸಿದ ಆಘಾತಕಾರಿ ಘಟನೆಯೊಂದು ಬೆಳಗಾವಿ ತಾಲೂಕಿನ ಪಂತಬಾಳೇಕುಂದ್ರಿ ಗ್ರಾಮದಲ್ಲಿ ನಡೆದಿದೆ.
2 ವರ್ಷದ ಅಬ್ಬಾಸ್ ಸನದಿ ನಾಯಿಗಳ ದಾಳಿಗೆ ಒಳಗಾದ ಮಗು. ಬೀದಿ ನಾಯಿಗಳು ಗಂಭೀರವಾಗಿ ಕಚ್ಚಿದ ಪರಿಣಾಮ ಅಬ್ಬಾಸ್ ಸ್ಥಿತಿ ಚಿಂತಾಜನಕವಾಗಿದೆ.
ಅಬ್ಬಾಸ್ ಸನದಿ ಮನೆ ಮುಂದೆ ಶೌಚಕ್ಕೆ ಕುಳಿತಿದ್ದನು. ಈ ವೇಳೆ ಬೀದಿ ನಾಯಿಗಳು ಏಕಾಏಕಿ ಆತನ ಮೇಲೆ ದಾಳಿ ಮಾಡಿವೆ. ಪರಿಣಾಮ ಮುಖ, ತಲೆ ಭಾಗ ಸೇರಿ ಮೈಯೆಲ್ಲಾ ಕಚ್ಚಿ, ತಿಂದು ಹಾಕುವ ಪ್ರಯತ್ನ ಮಾಡಿವೆ. ಘಟನೆಯಿಂದ ಗಂಭೀರ ಗಾಯಗೊಂಡ ಅಬ್ಬಾಸ್ ನನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.
ಸದ್ಯ ಅಬ್ಬಾಸ್ ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಗಾವಿಯ ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv