– ಹಸಿರು ಪಟಾಕಿಗಳನ್ನೇ ಬಳಸುವಂತೆ ಸಾರ್ವಜನಿಕರಿಗೆ ಮನವಿ
– ಸಮಯ ಮೀರಿ ಪಟಾಕಿ ಸಿಡಿಸಿದರೆ ಕಾನೂನು ಕ್ರಮದ ಎಚ್ಚರಿಕೆ
ಬೆಂಗಳೂರು: ದೀಪಾವಳಿ (Diwali) ಹಬ್ಬದ ಸಂಭ್ರಮಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ಸಜ್ಜಾಗುತ್ತಿದೆ. ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿರುವ ಬೆಂಗಳೂರು ನಗರ ಪೊಲೀಸ್ (Bengaluru Police) ಇಲಾಖೆ, ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಪಟಾಕಿ ಸಿಡಿಸುವುದರಿಂದ ಉಂಟಾಗುವ ವಾಯುಮಾಲಿನ್ಯ, ಶಬ್ದಮಾಲಿನ್ಯ ಹಾಗೂ ಅಗ್ನಿ ಅವಘಡಗಳನ್ನು ತಡೆಗಟ್ಟುವ ಉದ್ದೇಶದಿಂದ ಹಲವು ನಿಯಮಗಳನ್ನು ಜಾರಿಗೆ ತರಲಾಗಿದೆ.
ಸುಪ್ರೀಂ ಕೋರ್ಟ್ ಆದೇಶದಂತೆ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ (Fire Crackers) ಸಿಡಿಸಲು ಅವಕಾಶ ನೀಡಲಾಗಿದೆ. ನಿಗದಿತ ಸಮಯವನ್ನು ಮೀರಿ ಪಟಾಕಿ ಸಿಡಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪರಿಸರಕ್ಕೆ ಹಾನಿಯಾಗದಂತೆ ಸಾರ್ವಜನಿಕರು ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನೇ ಬಳಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ. ಹೆಚ್ಚು ಶಬ್ದ ಹಾಗೂ ವಾಯುಮಾಲಿನ್ಯ ಉಂಟುಮಾಡುವ ನಿಷೇಧಿತ ಪಟಾಕಿಗಳನ್ನು ಖರೀದಿಸಬಾರದು ಎಂದು ಸೂಚಿಸಿದ್ದಾರೆ. ಇದನ್ನೂ ಓದಿ: ಯಾವ್ದೇ ಭೌಗೋಳಿಕ ಮಿತಿಗಳಿಲ್ಲ, ಅಮೆರಿಕ ದಾಳಿ ಮಾಡಿದ್ರೆ ತಕ್ಷಣ ಪ್ರತಿಕ್ರಿಯೆ ಕೊಡಿ – ಇರಾನ್ ಸೇನೆಗೆ ಖಮೇನಿ ಆದೇಶ
ಆಸ್ಪತ್ರೆಗಳು, ಪೆಟ್ರೋಲ್ ಬಂಕ್ಗಳು, ಗ್ಯಾಸ್ ಸ್ಟೇಷನ್ಗಳ ಸುತ್ತಮುತ್ತ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಧಾರ್ಮಿಕ ಸ್ಥಳಗಳು, ವೃದ್ಧಾಶ್ರಮಗಳು ಹಾಗೂ ಮಕ್ಕಳ ಆರೈಕೆ ಕೇಂದ್ರಗಳ ಸಮೀಪವೂ ಪಟಾಕಿ ಸಿಡಿಸುವಂತಿಲ್ಲ. ಜನನಿಬಿಡ ಪ್ರದೇಶಗಳು, ಮುಖ್ಯ ರಸ್ತೆಗಳು ಮತ್ತು ವಾಹನಗಳ ಪಾರ್ಕಿಂಗ್ ಸ್ಥಳಗಳಲ್ಲಿ ಪಟಾಕಿ ಸಿಡಿಸದಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಉತ್ತರಾಖಂಡ ದುರಂತ – ನಾಳೆ ಮರಣೋತ್ತರ ಪರೀಕ್ಷೆ ಬಳಿಕ ಬೆಂಗಳೂರಿಗೆ ಮೃತದೇಹ ರವಾನೆ ಸಾಧ್ಯತೆ
ಪಟಾಕಿ ಖರೀದಿಸುವಾಗಲೂ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ಅಧಿಕೃತ ಪರವಾನಗಿ ಹೊಂದಿರುವ ಅಂಗಡಿಗಳಿAದ ಮಾತ್ರ ಪಟಾಕಿ ಖರೀದಿಸಬೇಕು. ಖರೀದಿಸುವ ಮುನ್ನ ಪಟಾಕಿ ಪ್ಯಾಕೆಟ್ ಮೇಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅದರ ಅಧಿಕೃತತೆಯನ್ನು ಪರಿಶೀಲಿಸುವಂತೆ ಪೊಲೀಸರು ಸೂಚಿಸಿದ್ದಾರೆ. ಅಕ್ರಮವಾಗಿ ಪಟಾಕಿ ಮಾರಾಟ ಮಾಡುವ ಅಂಗಡಿಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವಂತೆಯೂ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಇಂಡಿಯಾ ಒಕ್ಕೂಟದಿಂದ ಜನತಾ ಮಹಾಭಿಯೋಗ – ಜ್ಞಾನೇಶ್ ಕುಮಾರ್ ವಿರುದ್ಧ 6 ಆರೋಪಗಳನ್ನ ಪಟ್ಟಿ ಮಾಡಿದ ಖರ್ಗೆ
ಮಕ್ಕಳು ಪಟಾಕಿ ಸಿಡಿಸುವಾಗ ಪೋಷಕರು ಕಡ್ಡಾಯವಾಗಿ ಅವರೊಂದಿಗೆ ಇರಬೇಕು. ಪಟಾಕಿ ಸಿಡಿಸುವ ಸಂದರ್ಭದಲ್ಲಿ ಕೈಗವಸು ಮತ್ತು ಸುರಕ್ಷತಾ ಕನ್ನಡಕಗಳನ್ನು ಬಳಸಬೇಕು. ಮುನ್ನೆಚ್ಚರಿಕಾ ಕ್ರಮವಾಗಿ ನೀರು, ಮರಳು ಹಾಗೂ ಅಗ್ನಿಶಾಮಕ ಉಪಕರಣಗಳನ್ನು ಹತ್ತಿರದಲ್ಲೇ ಇಟ್ಟುಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ದಾಖಲೆಯಿಲ್ಲದ ಗ್ರಾಮಠಾಣಾ ಆಸ್ತಿಗೆ ಇ-ಸ್ವತ್ತು, ನ.2ರಿಂದ ಅರ್ಜಿ ಸ್ವೀಕಾರ: ಈಶ್ವರ ಖಂಡ್ರೆ
ಪಟಾಕಿ ಸಿಡಿಸುವ ವೇಳೆ ಯಾವುದೇ ಅವಘಡ ಸಂಭವಿಸಿದರೆ ತಕ್ಷಣವೇ ತುರ್ತು ಸಹಾಯವಾಣಿ 112 ಅಥವಾ ಅಂಬುಲೆನ್ಸ್ ಸೇವೆ 108ಕ್ಕೆ ಕರೆ ಮಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಚುನಾವಣೆಯಲ್ಲಿ ಸೋತಾಗ ಮಾತ್ರ ಕಾಂಗ್ರೆಸ್ಗೆ ಇವಿಎಂ ಸರಿ ಇಲ್ಲ, ಗೆದ್ದಾಗ ಎಲ್ಲವೂ ಸರಿ: ಆರ್.ಅಶೋಕ್ ವ್ಯಂಗ್ಯ
ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ, ಸ್ಫೋಟಕ ಕಾಯ್ದೆ ಹಾಗೂ ಮಾಲಿನ್ಯ ನಿಯಂತ್ರಣ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಲಾಗಿದೆ. ಇದನ್ನೂ ಓದಿ: 56ನೇ ವಯಸ್ಸಿನಲ್ಲಿ 2ನೇ ಮದ್ವೆ – ಹೊಸ ಜೀವನಕ್ಕೆ ಕಾಲಿಟ್ಟ ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ!
ಒಟ್ಟಿನಲ್ಲಿ, ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸುವುದರ ಜೊತೆಗೆ ಸಾರ್ವಜನಿಕರ ಸುರಕ್ಷತೆ, ಪರಿಸರ ಸಂರಕ್ಷಣೆ ಮತ್ತು ಇತರರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು ಎಂದು ಬೆಂಗಳೂರು ನಗರ ಪೊಲೀಸ್ ಇಲಾಖೆ ಮನವಿ ಮಾಡಿದೆ. ಇದನ್ನೂ ಓದಿ: 2027ರ ಜನವರಿ ಮೊದಲೆರಡು ವಾರಗಳಲ್ಲಿ ಜಿಪಂ, ತಾಪಂ ಚುನಾವಣೆ – ಈಶ್ವರ್ ಖಂಡ್ರೆ
