ನವದೆಹಲಿ: ಮಹಿಳೆಯರ ಮೇಲಿನ ದೌರ್ಜನ್ಯಗಳು ಮತ್ತು ಮಕ್ಕಳ ಸುರಕ್ಷತೆಯು ಸಮಾಜಕ್ಕೆ ಗಂಭೀರ ಕಾಳಜಿಯ ವಿಷಯವಾಗಿದ್ದು, ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ದೇಶಕ್ಕೆ ತ್ವರಿತ ತೀರ್ಪಿನ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು.
ಸುಪ್ರೀಂ ಕೋರ್ಟ್‌ಗೆ (Supreme Court) 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಿಳೆಯರ ಮೇಲಿನ ದೌರ್ಜನ್ಯಗಳು, ಮಕ್ಕಳ ಸುರಕ್ಷತೆ ಸಮಾಜದ ಗಂಭೀರ ವಿಷಯವಾಗಿದ್ದು ಅವರ ಸುರಕ್ಷತೆಗಾಗಿ ಹಲವು ಕಠಿಣ ಕಾನೂನುಗಳನ್ನು ಮಾಡಲಾಗಿದೆ. ಮಹಿಳೆಯರು ಕಾನೂನುಗಳ ಬಗ್ಗೆ ಅರಿಯುವ ಅಗತ್ಯವಿದೆ ಎಂದರು. ಇದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ ನರ್ಸ್ ಮೇಲೆ ಅತ್ಯಾಚಾರ – 59ರ ವ್ಯಕ್ತಿ ಬಂಧನ
ದೇಶದಲ್ಲಿ ಮಹಿಳೆಯರ ಸುರಕ್ಷತೆಯ ಸಮಸ್ಯೆಯನ್ನು ಪರಿಹರಿಸುವ ಸಲುವಾಗಿ 2019 ರಲ್ಲಿ ತ್ವರಿತ ನ್ಯಾಯಾಲಯಗಳ ಕಾನೂನನ್ನು ಅಂಗೀಕರಿಸಲಾಯಿತು. ಇಲ್ಲಿ ಜಿಲ್ಲಾ ಮೇಲ್ವಿಚಾರಣಾ ಸಮಿತಿಗಳು ಪ್ರಮುಖ ಪಾತ್ರವಹಿಸುತ್ತವೆ. ನಾವು ಈ ಸಮಿತಿಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಶೀಘ್ರ ತೀರ್ಪು ನೀಡಬೇಕು. ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಎಷ್ಟು ವೇಗವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಯೋ ಅದರಿಂದ ದೇಶದ ಅರ್ಧದಷ್ಟು ಜನಸಂಖ್ಯೆಗೆ ಸುರಕ್ಷತೆಯ ಹೆಚ್ಚಿನ ಭರವಸೆ ಸಿಗುತ್ತದೆ ಎಂದು ಒತ್ತಿ ಹೇಳಿದರು. ಇದನ್ನೂ ಓದಿ: ಪ್ರಿಯಕರನೊಂದಿಗೆ ಪತ್ನಿಯ ಖಾಸಗಿ ಕ್ಷಣ ವೀಡಿಯೋ ಮಾಡಿ ಹಂಚಿಕೊಂಡ ಪತಿ!