ಅಕ್ರಮ ಸಂಬಂಧ ಆರೋಪ – ಮಹಿಳೆಯ ವಿವಸ್ತ್ರಗೊಳಿಸಿ, ತಲೆ ಬೋಳಿಸಿ ಚಿತ್ರಹಿಂಸೆ

Public TV
1 Min Read
Stripped Beaten Head Shaved Telangana Woman Missing After Torture Over Adultery

ಹೈದರಾಬಾದ್‌: ವಿವಾಹಿತ ಮಹಿಳೆಯೊಬ್ಬಳು ಸಂಬಂಧಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಕುಟುಂಬಸ್ಥರು ವಿವಸ್ತ್ರಗೊಳಿಸಿ ಮಂಚಕ್ಕೆ ಕಟ್ಟಿ, ತಲೆ ಬೋಳಿಸಿ ಚಿತ್ರಹಿಂಸೆ ನೀಡಿದ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲ್ಲೆಯಿಂದಾಗಿ ಮಹಿಳೆಯ ಖಾಸಗಿ ಅಂಗಗಳಲ್ಲಿ ರಕ್ತಸ್ರಾವವಾಗಿದೆ. ಮಹಿಳೆ ಬಿಟ್ಟು ಬಿಡುವಂತೆ ಬೇಡಿಕೊಂಡರು ಚಿತ್ರಹಿಂಸೆ ನೀಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಮಂಗಳೂರು | ತಮ್ಮನ ಅಂತ್ಯಸಂಸ್ಕಾರಕ್ಕೆ ಬಂದಿದ್ದ ಅಕ್ಕ ಕೂಡ ಅಪಘಾತಕ್ಕೆ ಬಲಿ!

ರವಿ ಎಂಬಾತ ಸಂಬಂಧಿ ಮಹಿಳೆಯೊಂದಿಗೆ ವಿವಾಹೇತರ ಸಂಬಂಧವನ್ನು ಹೊಂದಿದ್ದ. ಘಟನೆಗೆ 10 ದಿನಗಳ ಮೊದಲು ಇಬ್ಬರು ನಾಪತ್ತೆಯಾಗಿದ್ದರು. ಈ ಇಬ್ಬರು ಸಿಕ್ಕಿಬಿದ್ದ ಬಳಿಕ ಅವರ ಮೇಲೆ ಕುಟುಂಬಸ್ಥರು ಹಲ್ಲೆ ನಡೆಸಿದ್ದಾರೆ. ಹಲ್ಲೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅವರಿಬ್ಬರೂ ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಹುಡುಕಾಟ ನಡೆಯುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಕನಿಷ್ಠ 14 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ವಾರಂಗಲ್ ಪೊಲೀಸ್ ಆಯುಕ್ತರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪ್ರಿಯಕರನ ಜೊತೆ ಸೇರಿ ಪತಿ ಕಣ್ಣಿಗೆ ಖಾರದ ಪುಡಿ ಎರಚಿ, ಕತ್ತಿನ ಮೇಲೆ ಕಾಲಿಟ್ಟು ಹತ್ಯೆಗೈದ ಪತ್ನಿ!

Share This Article