ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿಗೆ ಪ್ರಧಾನಿ ಮೋದಿ ಖಂಡನೆ

Public TV
1 Min Read
Narendra Modi in Fintech Fest 2024

ನವದೆಹಲಿ: ಕೆನಡಾದ (Canada) ಹಿಂದೂ ದೇವಾಲಯದ (Hindu Temple) ಮೇಲೆ ಉದ್ದೇಶಪೂರ್ವಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಖಂಡಿಸಿದ್ದಾರೆ. ಕಳೆದ ವಾರ ಒಂಟಾರಿಯೊದ ಬ್ರಾಂಪ್ಟನ್‌ನಲ್ಲಿ ಹಿಂದೂ ದೇವಾಲಯದ ಮೇಲೆ ಕೆಲವರು ದಾಳಿ ನಡೆಸಿದ್ದರು.

ಆ ದೇಶದಲ್ಲಿನ ಭಾರತೀಯ ರಾಜತಾಂತ್ರಿಕರನ್ನು ಬೆದರಿಸುವ ಹೇಡಿತನದ ಪ್ರಯತ್ನಗಳು ನಡೆಯುತ್ತಿವೆ ಎಂದು ಪ್ರಧಾನಿ ಟೀಕಿಸಿದ್ದಾರೆ. ಇಂತಹ ಹಿಂಸಾಚಾರಗಳು ಭಾರತದ ಸಂಕಲ್ಪವನ್ನು ಎಂದಿಗೂ ದುರ್ಬಲಗೊಳಿಸುವುದಿಲ್ಲ. ಕೆನಡಾದ ಸರ್ಕಾರವು ನ್ಯಾಯವನ್ನು ಖಚಿತಪಡಿಸುತ್ತದೆ ಮತ್ತು ಕಾನೂನಿನ ನಿಯಮವನ್ನು ಎತ್ತಿಹಿಡಿಯುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರಾಖಂಡ ಬಸ್ ಅಪಘಾತಕ್ಕೆ ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ, ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ

canada hindu temple

ಭಾರತ ಸರ್ಕಾರವು, ಉಗ್ರವಾದಿಗಳು ಮತ್ತು ಪ್ರತ್ಯೇಕತಾವಾದಿಗಳು ನಡೆಸಿದ ಹಿಂಸಾಚಾರದ ಕೃತ್ಯಗಳನ್ನು ಖಂಡಿಸುತ್ತದೆ ಎಂದು ವಿದೇಶಾಂಗ ಸಚಿವಾಲಯವು ಟೀಕಿಸಿತ್ತು. ಅದರ ಬೆನ್ನಲ್ಲೇ, ಪ್ರಧಾನಿಯವರು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿದ್ದಾರೆ. ಎಲ್ಲಾ ಪೂಜಾ ಸ್ಥಳಗಳನ್ನು ಸಮರ್ಪಕವಾಗಿ ರಕ್ಷಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಕೆನಡಾ ಆಡಳಿತ ವ್ಯವಸ್ಥೆಗೆ ಒತ್ತಾಯಿಸಿದ್ದಾರೆ.

ಇಂತಹ ಹಿಂಸಾಚಾರದಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದನ್ನು ನಾವು ನಿರೀಕ್ಷಿಸುತ್ತೇವೆ ಎಂದು ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಕೆನಡಾದಲ್ಲಿರುವ ತನ್ನ ನಾಗರಿಕರ ಮತ್ತು ಭದ್ರತೆಯ ಬಗ್ಗೆ ಭಾರತ ಸರ್ಕಾರವು ಆಳವಾದ ಕಾಳಜಿ ಹೊಂದಿದೆ ಎಂದು ಜೈಸ್ವಾಲ್ ತಿಳಿಸಿದ್ದಾರೆ. ಇದನ್ನೂ ಓದಿ: Jammu Kashmir | 6 ವರ್ಷದ ನಂತರ ನಡೆದ ಅಧಿವೇಶನದ ಮೊದಲ ದಿನವೇ ಗದ್ದಲ

Share This Article