ಮುಂಬೈ: ಪುಣೆಯ ಹಡಪ್ಸರ್‌ನಲ್ಲಿ ಟ್ರಾಫಿಕ್ ಜಾಮ್ ಮಧ್ಯೆ ಸಿಲುಕಿ ಹಾಕಿಕೊಂಡ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (Nationalist Congress Party) (ಎನ್‍ಸಿಪಿ) ನಾಯಕಿ ಮತ್ತು ಸಂಸದೆ ಸುಪ್ರಿಯಾ ಸುಲೆ (MP Supriya Sule) ಅವರು ತಮ್ಮ ಕಾರಿನಿಂದ ಇಳಿದು ಟ್ರಾಫಿಕ್ ಕ್ಲಿಯರ್ ಮಾಡಲು ಪ್ರಯತ್ನಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
हडपसर ते सासवड या पालखी महामार्गाकडे तातडीने अगदी ‘टॉप प्रायोरिटी’वर लक्ष देण्याची गरज आहे. या रस्त्याची प्रचंड अशी दुरवस्था झाली असून सातत्याने येथे वाहतूक कोंडी होते.आता तर अशी अवस्था आहे की येथे एक गाडी जरी बंद पडली तरी प्रचंड अशी वाहतूक कोंडी होते. pic.twitter.com/sRFfh4vn0s
— Supriya Sule (@supriya_sule) October 20, 2022
Advertisement
ಈ ವೀಡಿಯೋವನ್ನು ಸಂಸದೆ ಸುಪ್ರಿಯಾ ಸುಲೆ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಹಡಪ್ಸರ್‌ನಿಂದ (Hadapsar) ಸಾಸ್ವಾದ್‍ವರೆಗಿನ (Saswad) ಪಾಲ್ಖಿ ಹೆದ್ದಾರಿ (Palkhi Highway) ಕಡೆಗೆ ಹೆಚ್ಚಿನ ಗಮನ ನೀಡಬೇಕು. ಇಲ್ಲಿ ರಸ್ತೆಯ ಸ್ಥಿತಿ ಎಷ್ಟು ಕೆಟ್ಟದಾಗಿದೆ ಎಂದರೆ ನಿರಂತರ ಟ್ರಾಫಿಕ್ ಜಾಮ್ ಇರುತ್ತದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ (Nitin Gadkari) , ಈ ಕಾರ್ಯವನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು ಎಂದು ನಾನು ವಿನಂತಿಸುತ್ತೇನೆ. ದಯವಿಟ್ಟು ಈ ಬಗ್ಗೆ ಪಾಸಿಟಿವ್ ಆಗಿ ಯೋಚಿಸಿ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.
Advertisement
Advertisement
ಕಳೆದ ಒಂದು ವಾರದಲ್ಲಿ ಪುಣೆಯಲ್ಲಿ ಹೆಚ್ಚು ಮಳೆ ದಾಖಲಾಗಿದೆ. ಇದರಿಂದ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಿಸಿದೆ. ಇದನ್ನೂ ಓದಿ: ಕಾವೇರಿ ಕೊಳ್ಳದಲ್ಲಿ ಭರ್ಜರಿ ಮಳೆ – ತಮಿಳುನಾಡಿಗೆ ನಿಗದಿತ ಪ್ರಮಾಣಕ್ಕಿಂತ ನಾಲ್ಕೂವರೆ ಪಟ್ಟು ಅಧಿಕ ನೀರು ಬಿಡುಗಡೆ