ಹಾವೇರಿ: ಮುಖ್ಯೋಪಾಧ್ಯಾಯರ ವರ್ಗಾವಣೆಗೆ ವಿರೋಧಿಸಿ ಶಾಲಾ ಮಕ್ಕಳು ಮತ್ತು ಗ್ರಾಮಸ್ಥರು ಪ್ರತಿಭಟನೆ ಮಾಡಿದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಇಚ್ಚಂಗಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸರಕಾರಿ ಪ್ರೌಢಶಾಲೆ ಹೆಡ್ ಮಾಸ್ಟರ್ ಆಗಿ ಆರ್ ಮಂಜಪ್ಪ ಕಾರ್ಯನಿಹಿಸುತ್ತಿದ್ದರು. ಕಳೆದ ಆರು ವರ್ಷಗಳಿಂದ ಮಂಜಪ್ಪ ಶಾಲೆಯ ಅಭಿವೃದ್ಧಿಗಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಆದ್ರೆ ಇದೀಗ ಅವರು ಇಚ್ಚಂಗಿಯಿಂದ ಹಾವೇರಿಗೆ ವರ್ಗಾವಣೆಗೊಂಡಿದ್ದಾರೆ.
Advertisement
Advertisement
ಈ ಹಿನ್ನೆಲೆಯಲ್ಲಿ ವರ್ಗಾವಣೆ ಖಂಡಿಸಿ ಶಾಲೆಗೆ ಬೀಗ ಹಾಕಿ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರ ಪ್ರತಿಭಟನೆ ನಡೆಸಿದ್ದಾರೆ. ಹೆಡ್ ಮಾಸ್ಟರ್ ಮಂಜಪ್ಪರನ್ನು ಶಾಲೆಯಲ್ಲೇ ಮುಂದುವರಿಸುವಂತೆ ಒತ್ತಾಯಿಸಿದ್ದಾರೆ.
Advertisement
ಈ ಘಟನೆ ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನು ಓದಿ: ಸರ್, ಪ್ಲೀಸ್ ನಮ್ಮನ್ನ ಬಿಟ್ಟು ಹೋಗ್ಬೇಡಿ- ಮಕ್ಕಳಿಂದ ಶಿಕ್ಷಕನಿಗೆ ಮುತ್ತಿಗೆ