ಫ್ಲೋರಿಡಾ: ಶಾಲೆಗೆ ತಂದಿದ್ದ ವೀಡಿಯೋಗೇಮ್‍ನ್ನು ಕಸಿದುಕೊಂಡಿದ್ದಕ್ಕಾಗಿ 17 ವರ್ಷದ ಹುಡುಗನೊಬ್ಬ ಶಾಲೆಯ ಶಿಕ್ಷಕರೊಬ್ಬರ ಸಹಾಯಕಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಫ್ಲೋರಿಡಾದ ಮತಾನ್ಜಾಸ್‍ನಲ್ಲಿ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿದ್ಯಾರ್ಥಿ ಹಲ್ಲೆ ನಡೆಸುತ್ತಿರುವ ವೀಡಿಯೋವನ್ನು ಫ್ಲಾಗರ್ ಕೌಂಟಿ ಶೆರಿಫ್ ಕಛೇರಿಯು ಬಿಡುಗಡೆ ಮಾಡಿದೆ. ಅದರಲ್ಲಿ ವಿದ್ಯಾರ್ಥಿಯು ಸಹಾಯಕಿಯನ್ನು ನೆಲಕ್ಕೆ ತಳ್ಳಿ ಒದೆಯುವುದು ಮತ್ತು ಗುದ್ದುತ್ತಿರುವುದು ಸೆರೆಯಾಗಿದೆ. ಇದನ್ನೂ ಓದಿ: ನಿಲ್ಲಿಸಿದ್ದ ಬಸ್‍ಗಳಿಗೆ ಟ್ರಕ್ ಡಿಕ್ಕಿ- 8 ಮಂದಿ ಸಾವು, 50 ಮಂದಿಗೆ ಗಾಯ
ಶಿಕ್ಷಕ ಹಾಗೂ ಜನರು ಆತನನ್ನು ತಡೆಯುವ ತನಕ ನಿರಂತರವಾಗಿ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾಗಿದ್ದ ಸಹಾಯಕಿ ಸುಧಾರಿಸಿಕೊಳ್ಳಲು ಹಲವು ನಿಮಿಷಗಳನ್ನು ತೆಗೆದುಕೊಂಡಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.
ಹಲ್ಲೆಯಿಂದ ಪಕ್ಕೆಲುಬು ಹಾಗೂ ಮೂಳೆಗಳಿಗೆ ತೀವ್ರವಾಗಿ ಪೆಟ್ಟಾಗಿದ್ದ ಸಹಾಯಕಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇದನ್ನೂ ಓದಿ: ನಮ್ಮ ಸೊಸೈಟಿ ಬಗ್ಗೆ ಮಾತಾಡಲು ನೀನ್ಯಾರು?- ಎನ್.ಆರ್ ಸಂತೋಷ್‍ಗೆ ಗ್ರಾಮಸ್ಥರಿಂದ ತರಾಟೆ