ರಾಯಚೂರು: ಹೋಂ ವರ್ಕ್ ಮಾಡದಿದ್ದಕ್ಕೆ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಶಿಕ್ಷಕನ ವಿರುದ್ಧ ಎಫ್ಐಆರ್ ದಾಖಲಾಗಿರುವ ಘಟನೆ ರಾಯಚೂರು (Raichuru) ಜಿಲ್ಲೆಯ ಸಿರವಾರ (Sirwara) ತಾಲೂಕಿನ ಕವಿತಾಳದಲ್ಲಿ ನಡೆದಿದೆ.
ಕವಿತಾಳದ ಮದರಸಾ ವಸತಿ ಶಾಲೆಯಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ. 4ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಮೇಲೆ ಶಿಕ್ಷಕ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬರ ಪರಿಹಾರದಲ್ಲೂ ರೈತರಿಗೆ ತಾರತಮ್ಯ – 2,500 ರೂ. ಬದಲು 1,500 ರೂ. ಜಮೆ
ವಿದ್ಯಾರ್ಥಿಯ ಬೆನ್ನು, ಮುಖಕ್ಕೆ ಗುದ್ದಿದ ಪರಿಣಾಮ ಕಣ್ಣಿನ ಭಾಗದಲ್ಲಿ ಗಂಭೀರ ಗಾಯವಾಗಿದೆ. ಈ ಸಂಬಂಧ ಶಿಕ್ಷಕ ಅಬ್ಬಾಸ್ ವಿರುದ್ಧ ವಿದ್ಯಾರ್ಥಿಯ ಪೋಷಕರು ಆಕ್ರೋಶ ಹೊರಹಾಕಿದ್ದು, ಸದ್ಯ ಕವಿತಾಳ ಪೊಲೀಸ್ ಠಾಣೆಯಲ್ಲಿ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಾಗಿದೆ.
