Districts
ಬಸ್ ಸೌಲಭ್ಯಕ್ಕಾಗಿ ಸರ್ಕಾರಿ ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

ವಿಜಯಪುರ: ವಿದ್ಯಾರ್ಥಿಗಳು ಬಸ್ ಸೌಲಭ್ಯಕ್ಕಾಗಿ ಆಗ್ರಹಿಸಿ ಸರ್ಕಾರಿ ಬಸ್ ತಡೆದು ಪ್ರತಿಭಟನೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ.
ವಿದ್ಯಾರ್ಥಿಗಳ ಪ್ರತಿಭಟನೆಗೆ ಎಬಿವಿಪಿ ಕಾರ್ಯಕರ್ತರು ಸಾಥ್ ನೀಡಿದ್ದಾರೆ. ಪ್ರತಿಭಟನೆ ವೇಳೆ ಇಂಡಿ ಡಿಪೋ, ಕಂಡಕ್ಟರ್, ಡ್ರೈವರ್ ವಿರುದ್ಧ ವಿದ್ಯಾರ್ಥಿಗಳು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಎರಡು ದಿನಗಳಲ್ಲಿ ಬಸ್ ಸೌಲಭ್ಯ ಒದಗಿಸಬೇಕು. ಬಸ್ಗಳನ್ನ ಹಲಸಂಗಿ, ಹಿಂಗಣಿ, ಬರಗುಡಿ ಮಾರ್ಗವಾಗಿ ತೆರಳುವಂತೆ ವಿದ್ಯಾರ್ಥಿಗಳ ಆಗ್ರಹಿಸಿದರು. ಸ್ಥಳಕ್ಕೆ ಇಂಡಿ ಘಟಕದ ಸಾರಿಗೆ ಇಲಾಖೆ ವ್ಯವಸ್ಥಾಪಕ ವಾಗೇಶ ಭಜಂತ್ರಿ, ಗ್ರಾಮೀಣ ಪಿಎಸ್ಐ ಸಂಗಮೇಶ ಶಿರಗುಪ್ಪಿ ವಿದ್ಯಾರ್ಥಿಗಳಿಗೆ ಪ್ರತಿಭಟನೆ ಕೈಬಿಡುವಂತೆ ಮನವೊಲಿಸಿದರು.
ಎರಡು ದಿನಗಳಲ್ಲಿ ಬೇಡಿಕೆ ಈಡೇರಿಸುವುದಾಗಿ ಸಾರಿಗೆ ಅಧಿಕಾರಿಗಳು ಭರವಸೆ ನೀಡಿದ್ದಾರೆ. ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದಿದ್ದಾರೆ.
