ಕಲಬುರಗಿ: ಪಬ್‌ಜಿ (PUBG) ಗೇಮ್‌ನಲ್ಲಿ ಹಣ ಕಳೆದುಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ (Suicide) ಶರಣಾದ ಘಟನೆ ಕಲಬುರಗಿಯಲ್ಲಿ (Kalaburagi) ನಡೆದಿದೆ.
ಪ್ರವೀಣ್ ಪಾಟೀಲ್ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಕಲಬುರಗಿ ನಗರದ ದೇವಿ ನಗರ ಮನೆಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಪ್ರವೀಣ್ ನೇಣಿಗೆ ಶರಣಾಗಿದ್ದಾನೆ. ಈತ ಕಲಬುರಗಿ ನಗರದ ಖಾಸಗಿ ಕಾಲೇಜ್‌ನಲ್ಲಿ ಬಿಇ (BE) ವ್ಯಾಸಂಗ ಮಾಡುತ್ತಿದ್ದು, ಬಿಇ ಆರ್ಟಿಫೀಷಿಯಲ್ ಇಂಟಲಿಜೆನ್ಸ್ ಆ್ಯಂಡ್ ಮೆಷಿನ್ ಲರ್ನಿಂಗ್ ಕೋರ್ಸ್ ಮಾಡಿದ್ದ. ಇದನ್ನೂ ಓದಿ: ಚಿತ್ರದುರ್ಗ ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಅರೆಸ್ಟ್
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಲಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಪ್ರವೀಣ್ ಪಬ್‌ಜಿ ಗೇಮ್‌ನಿಂದ ಸಾಲ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಪಬ್‌ಜಿ ಗೇಮ್‌ನಲ್ಲಿ ಹಣ ಕಳೆದುಕೊಂಡ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಆರ್‌ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಡಿವಿಜನಲ್ ಸೆಕ್ಯುರಿಟಿ ಇನ್ಸ್‌ಪೆಕ್ಟರ್ ಅನುಮಾನಾಸ್ಪದ ಸಾವು
ಈ ಹಿಂದೆ ಉತ್ತರಕನ್ನಡದ (Uttara Kannada) ಯುವಕನೋರ್ವ ಆನ್‌ಲೈನ್ ಗೇಮ್ ಚಟಕ್ಕೆ ಬಿದ್ದು ಇದೇ ರೀತಿಯಾಗಿ ಲಕ್ಷಾಂತರ ರೂ. ಹಣವನ್ನು ಕಳೆದುಕೊಂಡ ಬಳಿಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದ. ಇದನ್ನೂ ಓದಿ: ಹಿಟ್ ಆ್ಯಂಡ್ ರನ್ ಕೇಸ್‌ಗೆ ತಂದೆ, ಮಗ ಬಲಿ – ಮತ್ತೋರ್ವನ ಸ್ಥಿತಿ ಗಂಭೀರ
Web Stories