ಬೆಂಗಳೂರು: 20 ವರ್ಷದ ವಿದ್ಯಾರ್ಥಿನಿಯೊಬ್ಬಳು (Student) ಬೆಂಗಳೂರಿನ ಸದಾಶಿವನಗರದ ಸ್ಯಾಂಕಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನ ಚಿಕ್ಕಬಾಣವರ ಮೂಲದ ತೇಜು (20) ಎಂದು ಗುರುತಿಸಲಾಗಿದೆ. ಘಟನೆ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಸದಾಶಿವನಗರ ಪೊಲೀಸರು (Sadashivanagara Police) ಮೃತದೇಹವನ್ನ ಹೊರಗೆ ತೆಗೆದಿದ್ದಾರೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಆಂಧ್ರ ಸಾರಿಗೆ ಸಂಸ್ಥೆಯ ಬಸ್ ಭೀಕರ ಅಪಘಾತ – ಚಾಲಕ, ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವು

ಪ್ರೀತಿ ವಿಚಾರಕ್ಕೆ ಆತ್ಮಹತ್ಯೆ ಶಂಕೆ
ಮೇಲ್ನೋಟಕ್ಕೆ, ಪ್ರೀತಿ ವಿಚಾರಕ್ಕೆ ತೇಜು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೂ ಮುನ್ನ ಆಕೆ ʻನನಗೆ ಜೀವನ ಸಾಕಾಗಿದೆʼ ಅಂತ ಗೆಳೆಯನಿಗೆ ಮೆಸೇಜ್ ಮಾಡಿದ್ದಾಳೆ. ಬಳಿಕ ಫೋನ್ ಸ್ವಿಚ್‌ಆಫ್ ಮಾಡಿಕೊಂಡಿದ್ದಾಳೆ. ಸೋಮವಾರ (ಜು.6) ರಂದು ಸ್ಯಾಂಕಿ ಕೆರೆ ಬಳಿ ಬಂದಿದ್ದ ತೇಜು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಇಂದು ಬೆಳಗಿನ ಜಾವ ಮೃತದೇಹ ಪತ್ತೆಯಾದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಪರಿಶೀಲನೆ ನಡೆಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಪಿಡಿಒ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಬಿಲ್ ಕಲೆಕ್ಟರ್ ಆತ್ಮಹತ್ಯೆ
