ಯಾದಗಿರಿ: ಶಿಕ್ಷಕರು ಬೈದಿದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದ್ದು, ಶಾಲೆಯ ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.
ಯಾದಗಿರಿ (Yadagiri) ಜಿಲ್ಲೆಯ ವಡಗೇರಾ ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಪವನ್ (15) ಮೃತ ಬಾಲಕ. 9ನೇ ತರಗತಿಯಲ್ಲಿ ಓದುತ್ತಿದ್ದ ಎನ್ನಲಾಗಿದೆ. ಇದನ್ನೂ ಓದಿ: ಶಬರಿಮಲೆ ಪ್ರವಾಸಕ್ಕೆ ತೆರಳಿದ್ದ ಕೋಲಾರ ಮೂಲದ ವ್ಯಕ್ತಿ ತಮಿಳುನಾಡಿನಲ್ಲಿ ನಾಪತ್ತೆ
ಶಿಕ್ಷಕರು ಬೈದಿದ್ದಕ್ಕೆ ಮನನೊಂದು ಜ.21ರಂದು ಶಾಲೆ ಆವರಣದ ಹಿಂಭಾಗದಲ್ಲಿರುವ ಗಿಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಬಳಿಕ ಮಗನ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಪವನ್ ತಂದೆ ಮಲ್ಲಪ್ಪ ವಡಗೇರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಮುಖ್ಯ ಶಿಕ್ಷಕ ಅಯ್ಯಪ್ಪ ಸೇರಿ 6 ಜನ ಶಿಕ್ಷಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಎಫ್‌ಐಆರ್ ದಾಖಲಿಸಿರುವ ಪೊಲೀಸರು ನಿಜವಾಗಿ ಶಿಕ್ಷಕರು ಬೈದಿದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡನಾ? ಅಥವಾ ಬೇರೆ ಏನಾದರೂ ಕಾರಣ ಇದ್ಯಾ ಎಂದು ಪತ್ತೆಹಚ್ಚಲಿದ್ದಾರೆ. ತನಿಖೆ ನಂತರ ಹೆಚ್ಚಿನ ಮಾಹಿತಿ ಗೊತ್ತಾಗಲಿದೆ. ಇದನ್ನೂ ಓದಿ: ಕಲಬುರಗಿ| ಪ್ರೀತಿಸಿ ಮದುವೆಯಾದ ಎರಡೇ ತಿಂಗಳಲ್ಲಿ ನವವಿವಾಹಿತೆ ಆತ್ಮಹತ್ಯೆ

