ಬಳ್ಳಾರಿ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ತೆಗೆದುಕೊಂಡ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಪೇಟೆಯಲ್ಲಿ ನಡೆದಿದೆ.
ಕೋಮಲವಲ್ಲಿ(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಕೋಮಲವಲ್ಲಿ ಹೊಸಪೇಟೆಯ ಟಿ.ಬಿ.ಡ್ಯಾಂ ನಿವಾಸಿಯಾಗಿದ್ದು, ಜಿಲ್ಲೆಯ ಸಂಡೂರಿನ ಕೇಂದ್ರಿಯ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.
ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಹಿನ್ನೆಲೆಯಲ್ಲಿ ನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಟಿ.ಬಿ.ಡ್ಯಾಂ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.