ಮೈಸೂರು: ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ಅರುಣಾಚಲ ಪ್ರದೇಶ ರಾಜ್ಯದ ಲೆಮೋ ಡ್ರೆಮೋ(22) ನೇಣಿಗೆ ಶರಣಾದ ವಿದ್ಯಾರ್ಥಿನಿ. ಲೆಮೋ ಡ್ರೆಮೋ ಸೇಂಟ್ ಫಿಲೋಮಿನಾ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದಳು. ಆದರೆ ಶಿವರಾತ್ರೀಶ್ವರ ನಗರದ ಪಿಜಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಲೆಮೋ ಡ್ರೆಮೋ ಟಿಬೆಟಿಯನ್ ಬಾಯ್ ಫ್ರೆಂಡ್ ಜೊತೆ ಲಿವಿಂಗ್ ಟುಗೆದರ್ ನಲ್ಲಿ ಇದ್ದಳು. ಆಗಾಗ ಪಿಜಿಗೂ ಬರುತ್ತಿದ್ದಳು. ಆದರೆ ಇದ್ದಕ್ಕಿದ್ದಂತೆ ತನ್ನ ರೂಮಿನಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಮಾಹಿತಿ ತಿಳಿದು ಎನ್.ಆರ್ ಪೊಲೀಸ್ ಠಾಣೆಯ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
ಎನ್.ಆರ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ಆದರೆ ಆತ್ಮಹತ್ಯೆಗೆ ನಿಖರವಾರ ಕಾರಣ ತಿಳಿದು ಬಂದಿಲ್ಲ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv