ಹಾಲ್ ಟಿಕೆಟ್ ನೀಡದಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Public TV
1 Min Read
RCR SUICIDE

ರಾಯಚೂರು: ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಪರೀಕ್ಷೆಯ ಹಾಲ್ ಟಿಕೆಟ್ ನೀಡದಿದ್ದಕ್ಕೆ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕುಮಾರ್ ನಾಯಕ್ (21) ನೇಣಿಗೆ ಶರಣಾದ ವಿದ್ಯಾರ್ಥಿ. ಇಲ್ಲಿನ ಲೋಯೋಲಾ ಪದವಿ ಕಾಲೇಜಿನ ಬಿಕಾಂ ಎರಡನೇ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದನು. ಮಾನ್ವಿ ಪಟ್ಟಣದ ಅಂಬೇಡ್ಕರ್ ವಸತಿ ನಿಲಯದಲ್ಲಿದ್ದ ವಿದ್ಯಾರ್ಥಿ ಬುಧವರ ರಾತ್ರಿ ವೇಳೆ ವಸತಿ ನಿಲಯದ ಪಕ್ಕದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

vlcsnap 2019 05 16 10h45m39s41

ಹಾಜರಾತಿ ಕಡಿಮೆ ಇರುವ ಕಾರಣ ಕಳೆದ ವರ್ಷವೂ ಸಹ ಪರೀಕ್ಷೆ ಬರೆಯಲು ಅವಕಾಶ ನೀಡಿರಲಿಲ್ಲ. ಈ ವರ್ಷವೂ ಹಾಲ್ ಟಿಕೆಟ್ ನೀಡದಿದ್ದಕ್ಕೆ ಮನನೊಂದು ಸಾವಿಗೆ ಶರಣಾಗಿದ್ದಾನೆ ಅಂತ ಮೃತ ವಿದ್ಯಾರ್ಥಿ ಪೋಷಕರು ಆರೋಪಿಸಿದ್ದಾರೆ. ಪೋಷಕರು ಸ್ವತಃ ಪ್ರಾಂಶುಪಾಲರ ಬಳಿ ಮನವಿ ಮಾಡಿದ್ದರೂ ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟಿರಲಿಲ್ಲ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಾಹಿತಿ ತಿಳಿದು ಮಾನ್ವಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಮಾಲ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *