ಬೆಂಗಳೂರು: ಶಾಲೆಯಲ್ಲಿ ಶಿಕ್ಷಕರು ಎಲ್ಲರ ಮುಂದೆ ನಿಂದಿಸಿ, ತನಗೆ ಹೊಡೆದರು ಎಂದು ಮನನೊಂದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಧಾನಿಯ ಉತ್ತರಹಳ್ಳಿಯಲ್ಲಿ ನಡೆದಿದೆ.
ಉತ್ತರಹಳ್ಳಿಯ ನಿವಾಸಿ ಧನುಷ್ ಎಂಬ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಧನುಷ್ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದನು. ಧನುಷ್ ಓದುತ್ತಿದ್ದ ಶಾಲೆಯ ಶಿಕ್ಷಕ ಬಾಲಕೃಷ್ಣ ಎಂಬವರು ಎಲ್ಲರ ಮುಂದೆ ನಿಂದಿಸಿ, ತನ್ನನ್ನು ಹೊಡೆದರು ಎಂಬ ಕಾರಣಕ್ಕೆ ವಿದ್ಯಾರ್ಥಿ ಮನನೊಂದಿದ್ದನು. ಅಲ್ಲದೇ ಶಿಕ್ಷಕನ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿ ಡೇತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Advertisement
Advertisement
ಡೆತ್‍ನೋಟ್‍ನಲ್ಲಿ ಶಿಕ್ಷಕ ಶಾಲೆಯಲ್ಲಿ ತನಗೆ ಕೊಡುತ್ತಿದ್ದ ಹಿಂಸೆಯ ಬಗ್ಗೆ ಬರೆದು ಮನೆಯಲ್ಲಿ ಯಾರು ಇಲ್ಲದ ವೇಳೆ ಧನುಷ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಗನ ಸಾವಿನಿಂದ ಮನನೊಂದಿರುವ ಪೋಷಕರು ಕಣ್ಣೀರಿಡುತ್ತಿದ್ದಾರೆ. ಹಾಗೆಯೇ ತಮ್ಮ ಮಗನ ಸಾವಿಗೆ ಕಾರಣರಾದ ಶಿಕ್ಷಕನನ್ನು ಬಂಧಿಸುವಂತೆ ಪೊಲೀಸರಿಗೆ ದೂರು ನೀಡಿ ಆಕ್ರೋಶ ಹೊರಹಾಕಿದ್ದಾರೆ.
Advertisement
ಸದ್ಯ ಈ ಘಟನೆ ಕುರಿತು ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ನೀಡಿದ್ದು, ಶಿಕ್ಷಕನ ವಿರುದ್ಧ ಪ್ರಕರಣ ದಾಖಲಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv