ಮೈಸೂರು: ಮೊಬೈಲ್ ಕಳೆದುಹೋದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.
ನಿಖಿತಾ(17) ಮೃತ ದುರ್ದೈವಿ. ಮೈಸೂರಿನ ಗಾಂಧಿನಗರದಲ್ಲಿ ಈ ಘಟನೆ ನಡೆದಿದೆ. ನಿಖಿತಾ ಗಾಯಿತ್ರಿಪುರಂನಲ್ಲಿರುವ ಗಣಪತಿ ಸಚ್ಚಿದಾನಂದ ಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ.
ನಿಖಿತಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳುವಾಗ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ. ಸದ್ಯ ವಿದ್ಯಾರ್ಥಿನಿಯ ಆತ್ಮಹತ್ಯೆಯ ಬಗ್ಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ಎನ್.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರು ಇದು ಮೊಬೈಲ್ ನಾಪತ್ತೆಯಿಂದ ಆದ ಆತ್ಮಹತ್ಯೆಯೋ ಅಥವಾ ಬೇರೆ ಕಾರಣ ಏನಾದರೂ ಇದೆಯೋ ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews