ರಾಯಚೂರು: ಮಾನ್ವಿಯ ಕರೇಗುಡ್ಡ ಗ್ರಾಮಕ್ಕೆ ಬಸ್‍ನಲ್ಲಿ ಸಿಎಂ ಗ್ರಾಮ ವಾಸ್ತವ್ಯಕ್ಕೆ ತೆರಳುತ್ತಿದ್ದಾಗ ಮಾರ್ಗಮಧ್ಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಕಣ್ಣಿರಿಟ್ಟು ಶಾಲಾ ಸಮಸ್ಯೆಗಳನ್ನ ಹೇಳಿಕೊಂಡಿದ್ದಳು. ಈ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸುತ್ತೇನೆ ಎಂದು ಸಿಎಂ ವಿದ್ಯಾರ್ಥಿನಿಗೆ ಭರವಸೆ ನೀಡಿದ್ದಾರೆ.
Advertisement
ಜೂನ್ 26 ರಂದು ಕರೇಗುಡ್ಡ ಗ್ರಾಮದಲ್ಲಿ ಗ್ರಾಮವಾಸ್ತವ್ಯ ಮಾಡಲು ಸಿಎಂ ಬರುತ್ತಿದ್ದಾಗ ತನ್ನ ಶಾಲೆಯ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ವಿದ್ಯಾರ್ಥಿ ಕಣ್ಣೀರಿಟ್ಟು ಕೇಳಿಕೊಂಡಿದ್ದಳು. ವಿದ್ಯಾರ್ಥಿನಿಯ ಮನವಿಗೆ ಸ್ಪಂದಿಸಿದ ಸಿಎಂ ಕೂಡಲೇ ಪರಿಹಾರ ಒದಗಿಸುವುದಾಗಿ ಭರವಸೆಯನ್ನು ನೀಡಿದ್ದರು.
Advertisement
Advertisement
ಸಮಸ್ಯೆ ಏನು?
ಮಾನ್ವಿ ತಾಲೂಕಿನ ನೀರಮಾನ್ವಿ ಗ್ರಾಮದ ಆದರ್ಶ ವಿದ್ಯಾಲಯದಲ್ಲಿ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. 6 ರಿಂದ 10ನೇ ತರಗತಿವರೆಗೆ ಇರುವ ಸರ್ಕಾರದ ವಿಶೇಷ ಸವಲತ್ತುಗಳ ಶಾಲೆಯಾಗಿದ್ದರೂ, ವಿದ್ಯಾರ್ಥಿಗಳಿಗೆ ಸರಿಯಾದ ಸವಲತ್ತುಗಳು ಸಿಗುತ್ತಿಲ್ಲ. ಈ ಶಾಲೆಯಲ್ಲಿ 18 ಶಿಕ್ಷಕರ ಬದಲಾಗಿ ಕೇವಲ 7 ಮಂದಿ ಶಿಕ್ಷಕರು ಮಾತ್ರ ಇದ್ದಾರೆ. ಅದರಲ್ಲೂ ಗಣಿತ, ಇಂಗ್ಲಿಷ್ ವಿಷಯಕ್ಕೆ ಶಿಕ್ಷಕರು ಇಲ್ಲದಿರುವುದು ಶಾಲೆಯ ಶೈಕ್ಷಣಿಕ ಗುಣಮಟ್ಟ ಕುಸಿಯಲು ಕಾರಣವಾಗಿದೆ.
Advertisement
ಶಿಕ್ಷಕರ ಕೊರೆತೆಯಿಂದ ವಿದ್ಯಾರ್ಥಿಗಳಿಗೆ ಕಷ್ಟವಾಗುತ್ತಿದೆ. ಶಾಲಾ ಶಿಕ್ಷಕರು ಅನೇಕ ಬಾರಿ ಶಿಕ್ಷಕರ ಕೊರತೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಅಲ್ಲದೆ ಮಾನ್ವಿ ತಾಲೂಕಿನ ವಿವಿಧ ಗ್ರಾಮಗಳ ವಿದ್ಯಾರ್ಥಿಗಳು ಇಲ್ಲಿ ಓದುತ್ತಿರುವುದರಿಂದ ವಸತಿ ನಿಲಯದ ಅವಶ್ಯಕತೆಯೂ ಇದೆ.
ಸಾಕಷ್ಟು ಬಾರಿ ಸಮಸ್ಯೆಗಳ ಬಗ್ಗೆ ದೂರು ಹೇಳಿದರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಇದೇ ಸರಿಯಾದ ಸಮಯ ಎಂದು ಭಾವಿಸಿ ಎಸ್‍ಡಿಎಂಸಿ ಸದಸ್ಯರು, ಪಾಲಕರು ಹಾಗೂ ಶಾಲಾ ವಿದ್ಯಾರ್ಥಿಗಳು ಸಿಎಂ ಗ್ರಾಮವಾಸ್ತವ್ಯಕ್ಕೆ ತೆರಳುತ್ತಿದ್ದಾಗ ಬಸ್ ನಿಲ್ಲಿಸಿ ತಮ್ಮ ಅಹವಾಲು ಸಲ್ಲಿಸಿದ್ದರು.
ವಿದ್ಯಾರ್ಥಿನಿಯ ಕಣ್ಣೀರಿಗೆ ಕರಗಿ ಸಿಎಂ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡುವುದಾಗಿ ಹೇಳಿ ಹೋಗಿದ್ದಾರೆ. ಸಿಎಂ ನೀಡಿದ ಭರವಸೆ ಈಡೇರಿಕೆ ಆಗುತ್ತಾ? ಇಲ್ಲವೇ ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.