ಯಾದಗಿರಿ: ಕಾಲುವೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿಯೊಬ್ಬ ಕಾಲು ಜಾರಿ ಬಿದ್ದು, ನೀರು ಪಾಲಾದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬೇವಿನಹಳ್ಳಿಯಲ್ಲಿ ನಡೆದಿದೆ.
ನಿಂಗಪ್ಪ (18) ನೀರು ಪಾಲಾದ ವಿದ್ಯಾರ್ಥಿ. ಈತ ಬೇವಿನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬೇವಿನಹಳ್ಳಿ ಬಳಿ ಶನಿವಾರ ಈ ಘಟನೆ ನಡೆದಿದೆ. ವೀಕೆಂಡ್ ಕಫ್ರ್ಯೂನಿಂದ ಕಾಲೇಜಿಗೆ ರಜೆ ಘೋಷಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಿಂಗಪ್ಪ ಕಾಲುವೆಯಲ್ಲಿ ಈಜಲು ಹೋಗಿದ್ದ. ಇದನ್ನೂ ಓದಿ: ಡಿಕೆ ದಾಟಲಿಲ್ಲ, ಮೇಕೆಯಾದರೂ ದಾಟಲಿ: ಬಿಜೆಪಿ ವ್ಯಂಗ್ಯ
Advertisement
Advertisement
ಈಜಲು ಬಾರದೆ ಇದ್ದರು, ಸ್ನೇಹಿತರ ಜೊತೆ ಸೇರಿ ಈಜಲು ಹೋಗಿದ್ದ. ಕಾಲುವೆಯಲ್ಲಿ ಇಳಿದು ಈಜಲು ಪ್ರಯತ್ನಿಸಿದ್ದ. ಆ ಸಂದರ್ಭದಲ್ಲಿ ಕಾಲುವೆಯಲ್ಲಿ ರಭಸವಾಗಿ ನೀರು ಹರಿಯುತ್ತಿತ್ತು. ನೀರಿಗೆ ಸಿಲುಕಿ ನಿಂಗಪ್ಪ ಕೊಚ್ಚಿ ಹೋಗಿದ್ದಾರೆ. ಪ್ರಕರಣ ಸಂಬಂಧಿಸಿ ನಿಂಗಪ್ಪನಿಗಾಗಿ ಅಗ್ನಿ ಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದೆ. ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್ ಚಾಲನೆ