ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ಕಾಲು ಜಾರಿ ಕಾಲುವೆಗೆ ಬಿದ್ದು ಸಾವು

Public TV
1 Min Read
BLY STUDENT DEATH

ಬಳ್ಳಾರಿ: ಹಂಪಿ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಯೊಬ್ಬ ಕಾಲು ಜಾರಿ ಕಾಲುವೆಗೆ ಬಿದ್ದು ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾಳೆಮ್ಮಗುಡಿ ಬಳಿ ನಡೆದಿದೆ.

ವಿನೋದ್ ಅತ್ತಿಗೇರಿ (16) ಮೃತಪಟ್ಟ ವಿದ್ಯಾರ್ಥಿ. ಮೂಲತಃ ವಿನೋದ್ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಶಂಶಿ ಗ್ರಾಮದ ಪ್ರೌಢ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ. ಶಾಲಾ ವತಿಯಿಂದ ಹಂಪಿ-ಹೊಸಪೇಟೆಗೆ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಂಡಿದ್ದರು.

vlcsnap 2018 12 15 18h21m13s106

ಶನಿವಾರ ಹೊಸಪೇಟೆ ತಾಲೂಕಿನ ಗಾಳೆಮ್ಮಗುಡಿ ಬಳಿಯ ತುಂಗಭದ್ರ ಹೆಚ್.ಎಲ್.ಸಿ ಕಾಲುವೆಯ ಬಳಿ ಕಾಲು ಜಾರಿ ನೀರುಪಾಲಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ನೀರಿನಲ್ಲಿ ಮುಳುಗಿರುವ ವಿದ್ಯಾರ್ಥಿ ಶವವನ್ನು ಹೊರ ತೆಗೆಯಲು ನುರಿತು ಈಜುಗಾರರಿಂದ ಶೋಧ ಕಾರ್ಯ ನಡೆಸುತ್ತಿದ್ದಾರೆ. ಹಂಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com

Share This Article
Leave a Comment

Leave a Reply

Your email address will not be published. Required fields are marked *