ಬೆಂಗಳೂರು: ಸುಧಾಮನಗರದಲ್ಲಿ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಫೋಟೋಶೂಟ್‍ಗೆ ಬಿಡದಿದ್ದಕ್ಕೆ ಸೂಸೈಡ್ ಮಾಡಿಕೊಂಡಿರುವ ವಿಚಾರ ಬಯಲಾಗಿದೆ.
ಈ ಸಂಬಂಧ ಕೇಂದ್ರ ಡಿಸಿಪಿ ಶೇಖರ್ ಪ್ರತಿಕ್ರಿಯಿಸಿ, ಫೋಟೋ ಶೂಟ್‍ಗೆ ತೆರಳಲು ಸಜ್ಜಾಗಿದ್ದಳು. ಈ ಫೋಟೋ ಶೂಟ್‍ಗೆ ಹೋಗೋದು ಬೇಡ ಎಂದು ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದಿದ್ದಾರೆ. ಇದನ್ನೂ ಓದಿ: ಫ್ಯಾನ್‍ಗೆ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ
ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿದ್ದ 21 ವರ್ಷದ ವರ್ಷಿಣಿ ಜಯನಗರದ ಕಮ್ಯೂನಿಟಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಆದರೆ ಇಂದು ಈಕೆ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಬಳಿಕ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಈ ಸಂಬಂಧ ಯುವತಿಯ ಪೋಷಕರು ನೀಡಿದ ದೂರಿನ ಅನ್ವಯ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಕಲಿ ದಾಖಲೆ ಸೃಷ್ಠಿಸಿ ಭಾರತ ಸೇರಿದ್ದ ಅತ್ಯಾಚಾರಿ ಆರೋಪಿ ಮೌಲ್ವಿ- ಸ್ಫೋಟಕ ಸತ್ಯ ಬಯಲು