ಚಿಕ್ಕಬಳ್ಳಾಪುರ: ಹಾಸ್ಟೆಲ್ ಮೇಲಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು, ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಬಳಿಯ ಗೀತಂ ವಿಶ್ವವಿದ್ಯಾಲಯದಲ್ಲಿ ನಡೆದಿದೆ.
ಉಗಾಂಡ ದೇಶದ ಹಸೀನಾ ಮೃತ ದುರ್ದೈವಿಯಾಗಿದ್ದು, ಗೀತಂ ವಿಶ್ವವಿದ್ಯಾಲಯದ ಬಿಬಿಎ ವಿದ್ಯಾರ್ಥಿನಿಯಾಗಿದ್ದಾರೆ. ಬಟ್ಟೆ ತರಲೆಂದು 7ನೇ ಮಹಡಿ ಮೇಲೆ ಹೋಗಿದ್ದ ಹಸೀನಾ ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ 6ನೇ ಮಹಡಿಯಿಂದ ಬಿದ್ದಿದ್ದಾರೆ. ಇದನ್ನೂ ಓದಿ: ಹಲಾಲ್ ಮಾಂಸ, ಮಸೀದಿಗಳಲ್ಲಿ ಧ್ವನಿವರ್ಧಕ ಏಕೆ ನಿಷೇಧಿಸಬೇಕು: ಒಮರ್ ಅಬ್ದುಲ್ಲಾ ಪ್ರಶ್ನೆ
ನಂತರ ಒಂದು ಗಂಟೆ ಕಳೆದರೂ ಹಸೀನಾರನ್ನು ಆಸ್ಪತ್ರೆಗೆ ಕರೆದೊಯ್ಯದೆ ನಿರ್ಲಕ್ಷ್ಯ ತೋರಿಸಿದ ಹಿನ್ನೆಲೆ ರೊಚ್ಚಿಗಿದ್ದ ಇತರೆ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿ ಹಾಸ್ಟೆಲ್‍ನ ಕಿಟಕಿ ಬಾಗಿಲಿನ ಗಾಜುಗಳನ್ನು ಪುಡಿ, ಪುಡಿಗೊಳಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಣಾಮವಾಗಿ ಹಾಸ್ಟೆಲ್‌ನಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಇದನ್ನೂ ಓದಿ: ಕೊರೊನಾ ಇನ್ನೂ ಮುಗಿದಿಲ್ಲ, ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸಿ: ಉದ್ಧವ್ ಠಾಕ್ರೆ