ಹಾವೇರಿ: ಹೋರಿ ಬೆದರಿಸುವ ಹಬ್ಬದಲ್ಲಿ ಹೋರಿ ತಿವಿದು ಹದಿನೈದು ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಹಾವೇರಿ (Haveri) ಜಿಲ್ಲೆ ಬ್ಯಾಡಗಿ (Byadagi) ತಾಲೂಕಿನ ಚಿನ್ನಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಹದಿನೈದು ವರ್ಷ ವಯಸ್ಸಿನ ವಸಂತ ವೀರಾಪುರ ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿ ಬ್ಯಾಡಗಿ ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಶಾಲೆಗೆ ಹೋಗುತ್ತೇನೆ ಎಂದು ಹೇಳಿ ಹೋರಿ ಹಬ್ಬಕ್ಕೆ ಹೋದಾಗ ಈ ದುರ್ಘಟನೆ ನಡೆದಿದೆ. ಇದನ್ನೂ ಓದಿ: ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ʻಸೂರ್ಯ ಘರ್ʼ ಯೋಜನೆ ಬಗ್ಗೆ ಭಾರಿ ನಿರ್ಲಕ್ಷ್ಯ – ಸಚಿವ ಜೋಶಿ
ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಇದೇ ಮೊದಲ ಬಾರಿಗೆ ರಾಜ್ಯಸಭೆ ಸಭಾಪತಿ ವಿರುದ್ಧ ಅವಿಶ್ವಾಸ ಮಂಡನೆ!