ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಹೃದಯಾಘಾತ – ವಿದ್ಯಾರ್ಥಿನಿ ಸಾವು

Public TV
1 Min Read
Chikkodi Student Heart Attack

ಚಿಕ್ಕೋಡಿ: ಶಾಲೆಯಲ್ಲಿ ಆಟವಾಡುತ್ತಿದ್ದ ಸಂದರ್ಭ ಹೃದಯಾಘಾತಕ್ಕೊಳಗಾಗಿ (Heart Attack) ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಥಣಿ (Athani) ತಾಲೂಕಿನ ಚಮಕೇರಿ ಗ್ರಾಮದಲ್ಲಿ ನಡೆದಿದೆ.

ಅಥಣಿ ತಾಲೂಕಿನ ಬೇಡರಹಟ್ಟಿ ಗ್ರಾಮದ ರೇಣುಕಾ ಸಂಜಯ್ ಬಂಡಗಾರ (15) ಮೃತ ವಿದ್ಯಾರ್ಥಿನಿ. ಚಮಕೇರಿ ಗ್ರಾಮದ ಖಾಸಗಿ ಶಾಲೆಯಲ್ಲಿ 9 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ರೇಣುಕಾ ಆಟವಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾಳೆ. ಹೃದಯಾಘಾತದ ವಿಷಯ ತಿಳಿಯುತ್ತಿದ್ದಂತೆಯೇ ಶಾಲೆಯ ಶಿಕ್ಷಕರು ಹಾಗೂ ಪೋಷಕರು ಹೆಚ್ಚಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಭಾರತದ ಮಾಜಿ ಸ್ಪಿನ್ನರ್ ದಿಲೀಪ್ ದೋಶಿ (77) ನಿಧನ

ಆದರೆ ಅಥಣಿ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿಯೇ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ. ಮಗಳನ್ನು ಕಳೆದುಕೊಂಡ ಪೋಷಕರ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: Tumakuru | ಸ್ಟೇಟಸ್‌ಗೆ ರೀಲ್ಸ್ ಅಪ್ಲೋಡ್ ಮಾಡಿದ್ದಕ್ಕೆ ಪ್ರಿಯಕರ ಕಿರಿಕ್ – ಯುವತಿ ನೇಣಿಗೆ ಶರಣು

Share This Article