ಭೋಪಾಲ್: ಲೈಂಗಿಕ ದೌರ್ಜನ್ಯದ ದೂರನ್ನು ಹಿಂಪಡೆಯಲು ನಿರಾಕರಿಸಿದ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯಲ್ಲಿ ನಡೆದಿದೆ.
23 ವರ್ಷದ ಯುವತಿ ಕೊಲೆಯಾದ ದುರ್ದೈವಿಯಾಗಿದ್ದಾಳೆ. ಅನಿಲ್ ಶರ್ಮಾ (38) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಸೋಮವಾರ ಸಿಯೋನಿ ನಗರದ ನೇತಾಜಿ ಸುಭಾಷ್ ಚಂದ್ರಬೋಸ್ ಸರ್ಕಾರಿ ಮಹಿಳಾ ಕಾಲೇಜಿಗೆ ಹೋಗುತ್ತಿದ್ದ ಯುವತಿಯನ್ನು ದಾರಿಯಲ್ಲೇ ಅಡ್ಡಗಟ್ಟಿದ ಆರೋಪಿಯು, ಆಕೆಯ ಕೂದಲನ್ನು ಹಿಡಿದು ಎಳೆದಾಡಿದ್ದಾನೆ. ಇಷ್ಟಕ್ಕೆ ಸುಮ್ಮನಾಗದೇ ಆಕೆಯ ತಲೆಯನ್ನು ಕಲ್ಲಿಗೆ ಜಜ್ಜಿ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯಾದ ಅರವಿಂದ್ ಜೈನ್ ತಿಳಿಸಿದ್ದಾರೆ.
Advertisement
Advertisement
ಕೂಡಲೇ ಸ್ಥಳೀಯರು ಆರೋಪಿಯನ್ನು ಹಿಡಿದು, ಯುವತಿಯನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದರು. ಆದರೆ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದರಿಂದ ಆಸ್ಪತ್ರೆಗೆ ತೆರಳುವ ಮುನ್ನವೇ ಯುವತಿ ಮೃತಪಟ್ಟಿದ್ದಾಳೆಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
ಘಟನೆ ಸಂಬಂಧ ಆರೋಪಿಯನ್ನು ಬಂಧಿಸಿದ್ದು, ಕೊಲೆಯಾದ ಯುವತಿ ಹಾಗೂ ಆರೋಪಿಯು ಇಬ್ಬರು ಒಂದೇ ಊರಿನವರಾಗಿದ್ದರು. ಕೆಲವು ದಿನಗಳ ಹಿಂದೆ ಯುವತಿಯ ಮೇಲೆ ಅನಿಲ್ ಶರ್ಮ ಲೈಂಗಿಕ ದೌರ್ಜನ್ಯ ಎಸಗಿದ್ದ, ಹೀಗಾಗಿ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಈ ದೂರನ್ನು ಹಿಂಪಡೆಯಲು ಯುವತಿ ನಿರಾಕರಿಸಿದ್ದಕ್ಕೆ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv