Connect with us

Crime

ವಿದ್ಯಾರ್ಥಿನಿಯ ಜೊತೆ ಅನುಚಿತ ವರ್ತನೆ – ಚಾಲಕನ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

Published

on

ಹುಬ್ಬಳ್ಳಿ: ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ ತೋರಿದ್ದಾನೆ ಎಂದು ಆರೋಪಿಸಿ ಬೆನಕ ಶಾಲೆಯ ವಾಹನದ ಚಾಲಕನ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಪೋಷಕರು ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಡೆವಿಡ್ ಅನುಚಿತವಾಗಿ ವರ್ತಿಸಿದ ಚಾಲಕ. ರಾಮಲಿಂಗೇಶ್ವರ ನಗರದ ನಿವಾಸಿ ಆಗಿರುವ ಡೆವಿಡ್, ವಿವೇಕಾನಂದ ನಗರದಲ್ಲಿರುವ ಬೆನಕ ಶಾಲೆಯಲ್ಲಿ ವಾಹನದ ಚಾಲಕನಾಗಿದ್ದಾನೆ. ಡೆವಿಡ್ ಹತ್ತನೇ ತರಗತಿಯ ವಿದ್ಯಾರ್ಥಿನಿ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ, ಕೂಡಲೇ ಕಾನೂನು ಕ್ರಮ ಜರುಗಿಸಬೇಕು ಎಂದು ಪೋಷಕರು ಪಟ್ಟು ಹಿಡಿದರು.

ಬೆಳ್ಳಂಬೆಳಗ್ಗೆ ಶಾಲೆಗೆ ಆಗಮಿಸಿದ ಪೋಷಕರು ಶಾಲಾ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ಮಕ್ಕಳನ್ನು ಬೆನಕ ಶಾಲೆಗೆ ಕಳುಹಿಸಲು ಮೊದಲೆಲ್ಲ ಖುಷಿಯಾಗುತ್ತಿತ್ತು. ಆದರೆ ಪ್ರಸ್ತುತ ಬೆಳವಣಿಗೆಯಿಂದ ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯಪಡುವಂತಾಗಿದೆ ಎಂದು ಪೋಷಕರು ಮಾಧ್ಯಮದ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

Click to comment

Leave a Reply

Your email address will not be published. Required fields are marked *