ಬಳ್ಳಾರಿ: ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ನೀರು ಇಲ್ಲದೇ ಇರುವದರಿಂದ ಕಾಲುವೆಯಲ್ಲಿ ಸ್ನಾನ ಮಾಡಲು ಹೋದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.
ಮೊದನ್ ಸಾಬ್(21) ಮೃತ ವಿದ್ಯಾರ್ಥಿ. ಬಳ್ಳಾರಿಯ ಗೌತಮ್ ನಗರದ ಬಿಸಿಎಂ ಹಾಸ್ಟೆಲ್ ನಲ್ಲಿರುವ ಭಾಷಾ ಇಂದು ಮುಂಜಾನೆ ಎಚ್‍ಎಲ್‍ಸಿ ಕಾಲುವೆಯಲ್ಲಿ ಸ್ನಾನ ಮಾಡಲು ಹೋಗಿದ್ದಾರೆ. ನೀರು ಜೋರಾಗಿ ಹರಿಯುತ್ತಿದ್ದರಿಂದ ಸ್ನಾನ ಮಾಡುವ ವೇಳೆಯಲ್ಲಿ ಸುಳಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.
Advertisement
ಬಿಸಿಎಂ ಹಾಸ್ಟೆಲ್‍ನಲ್ಲಿ ಸರಿಯಾಗಿ ಮೂಲಭೂತ ಸೌಲಭ್ಯಗಳು ಇಲ್ಲದ ಪರಿಣಾಮ ವಿದ್ಯಾರ್ಥಿಗಳು ಕಾಲುವೆ ನೀರಿನಲ್ಲೆ ಸ್ನಾನ ಮಾಡಬೇಕಾಗಿದೆ. ಹೀಗಾಗಿ ಸ್ನಾನ ಮಾಡಲು ಹೋಗಿದ್ದ ಭಾಷಾ ನೀರುಪಾಲಾಗಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಹಾಸ್ಟೆಲ್ ಮುಂಭಾಗದಲ್ಲಿ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
Advertisement
ವಿಷಯ ತಿಳಿದು ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಮೃತ ದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಈ ಸಂಬಂಧ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.